ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ: ಪಾರ್ವತಿ ಬಾಲ ಸೇವಾಶ್ರಮದ ಮಕ್ಕಳೊಂದಿಗೆ ಆಚರಣೆ

ಚಾಮರಾಜನಗರ: ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 79ನೇ ಹುಟ್ಟುಹಬ್ಬದ ಅಂಗವಾಗಿ ಸೇವಾ ಭಾರತಿ ಚಾರಿಟಬಲ್ ಟ್ರಸ್ಟ್ ನ ಪಾರ್ವತಿ ಬಾಲ ಸೇವಾಶ್ರಮದ ಮಕ್ಕಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಚಾಮರಾಜನಗರ ಜಿಲ್ಲಾ ಕಚೇರಿ ವತಿಯಿಂದ ಒಂದು ದಿನ ತಿಂಡಿ, ಭೋಜನ ವ್ಯವಸ್ಥೆ, ಹಣ್ಣು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷ ಬಿಕೆ ರವಿಕುಮಾರ್ ಮಾತನಾಡಿ, ಚಾಮರಾಜನಗರ: ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ ಅವರು, ಅವರ ಶ್ರೀಮತಿಯವರು ಅವರ ಕೂಡ ಸಂಪೂರ್ಣ ತಮ್ಮನ್ನು ತಾವೂ ಸಮಾಜಸೇವೆಗೆ ಅರ್ಪಿಸಿಕೊಂಡಿದ್ದಾರೆ. ದೌರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ಥಾಪಿಸಿಕೊಂಡು ಅದರ ಮೂಲಕವೇ ನಾನಾ ಸೇವೆಗಳನ್ನು ಮಾಡುತ್ತಿದ್ದಾರೆ. ಸಂಸ್ಥೆಯ ವತಿಯಿಂದ ಬಡವರು, ನಿರ್ಗತಿಕರಿಗೆ ಉಚಿತ ಮನ್ ನಿರ್ಮಿಸಿಕೊಡುವುದು, ಓದುವ ಮಕ್ಕಳಿಗೆ ವಿದ್ಯಾರ್ಥಿವೇತನ ಕೊಟ್ಟು ಪ್ರೋತ್ಸಾಹಿಸುವ ಕೆಲಸ ಮಾಡುತಿದ್ದಾರೆ. ಕೆರೆಗಳ ಅಭಿವೃದ್ಧಿ ಪಡಿಸುವುದು ಮಾಡುತ್ತಿದ್ದಾರೆ. ಅವರಿಗೆ ದೇವರು ಹೆಚ್ಚಿನ ಆಯಸ್ಸು, ಆರೋಗ್ಯ ಕರುಣಿಸಿ, ನಾಡಿನಲ್ಲಿ ಹೆಚ್ಚು ಬಡವರ ಸೇವೆ ಮಾಡುವಂತಾಗಲಿ ಎಂದು ಶುಭ ಕೋರಿದರು.

ರೋಟರಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಜಿಲ್ಲಾ ನಿರ್ದೇಶಕ ದಿನೇಶ್ ಮಾತನಾಡಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯ ಪ್ರಕಾಶ, ರೋಟರಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಜಿಲ್ಲಾ ನಿರ್ದೇಶಕ ದಿನೇಶ್ , ತಾಲೂಕು ಯೋಜನಾಧಿಕಾರಿ ರವಿಚಂದ್ರ, ಎಮ್ ಐ ಎಸ್ ಯೋಜನಾಧಿಕಾರಿ ಆರತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿಯ ಎಲ್ಲಾ ಸಿಬ್ಬಂದಿಗಳು ಹಾಗೂ ಜಿಲ್ಲಾ ಕಚೇರಿ ಸಿಬ್ಬಂದಿಗಳು ಸೇವಾ ಭಾರತಿ ಚಾರಿಟಬಲ್ ಟ್ರಸ್ಟ್ ನ ಮುಖ್ಯಸ್ಥ ಮಧು ಹಾಜರಿದ್ದರು.

Leave a Reply

Your email address will not be published. Required fields are marked *