- ಅಲೆಮಾರಿ ಶಿಳ್ಳೇಕ್ಯಾತ ಸಮುದಾಯದ ಪರವಾಗಿ ಹಾರ್ದಿಕ ಅಭಿನಂದನೆಗಳು

ಚಾಮರಾಜನಗರ : ಅಲೆಮಾರಿ ಶಿಳ್ಳೇಕ್ಯಾತ ಸಮುದಾಯದ ಪರ್ಯಾಯ ಜಾತಿಗಳ ಕುರಿತು ಸಮಗ್ರ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿರುವ ಚಾಮರಾಜನಗರ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಎಂ.ಆರ್. ಗಂಗಾಧರ್ ಅವರಿಗೆ, ಉತ್ತರ ಕರ್ನಾಟಕದ ಇಳಕಲ್ ಮಹಾಂತ ಸ್ವಾಮಿಗಳ
ಹೆಸರಿನಲ್ಲಿ ವ್ಯಸನಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಷ್ಠಿತ ಬಸವ ಮಹಾಂತ ಶ್ರೀಗಳ ಪ್ರಶಸ್ತಿ ಪ್ರದಾನ ಮಾಡಿರುವುದು ಅತ್ಯಂತ
ಸಂತಸದ ಹಾಗೂ ಹೆಮ್ಮೆಯ ವಿಷಯವಾಗಿದೆ.
ಸಂಶೋಧನಾ ಮತ್ತು ಸಾಮಾಜಿಕ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿರುವ ಇಂತಹ ವಿದ್ವಾಂಸರನ್ನು ಗುರುತಿಸಿ ಗೌರವಿಸಿರುವುದು ನಿಜಕ್ಕೂ ಶ್ಲಾಘನೀಯ. ಡಾ. ಗಂಗಾಧರ್ ಅವರ ಸಂಶೋಧನಾ ಸಾಧನೆಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಮೀರಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿವೆ. ಉತ್ತರ ಕರ್ನಾಟಕದ ನೆಲದಲ್ಲಿ ಇಂತಹ ಮಹಾನ್ ಸಂಶೋಧಕರಿಗೆ ಬಸವ ಮಹಾಂತ ಶ್ರೀಗಳ ಪ್ರಶಸ್ತಿ ನೀಡಿ ಸನ್ಮಾನಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.
ಈ ಹಿನ್ನೆಲೆಯಲ್ಲಿ ಅಲೆ ಮಾರಿ ಶಿಳ್ಳೇಕ್ಯಾತರ ಅಭಿವೃದ್ಧಿ ಸಂಘದ ಪರವಾಗಿ ಡಾ.ಎಂ.ಆರ್. ಗಂಗಾಧರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗ ದರ್ಶಕರಾಗಲಿ ಎಂದು ಡಾ
ಸಣ್ಣವೀರಣ್ಣ ದೊಡ್ಡಮನಿ ಗೌರವಾದ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ವಿಲಾಸ ಸಿಂಧೆ ಹಾರೈಸಿದ್ದಾರೆ.