ಬಡ್ತಿ ಹೊಂದಿದ ಡಾ.ನವೀನ್ ಅವರಿಗೆ ಸನ್ಮಾನ

  • ವೈದ್ಯರ ನಿಸ್ವಾರ್ಥ ಸೇವೆ ಅನನ್ಯ: ಸಿ.ಎಂ.ನರಸಿಂಹಮೂರ್ತಿ

ಚಾಮರಾಜನಗರ : ನಗರದ ಹೊರಹೊಲಯದ ಯಡಬೆಟ್ಟದಲ್ಲಿರುವ ಚಾಮರಾಜನಗರ ವ್ಯದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಚರ್ಮರೋಗ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪರಾಗಿ ಸೇವೆ ಸಲ್ಲಿಸಿ ಮುಖ್ಯಸ್ಥರಾಗಿ ಬಡ್ತಿ ಹೊಂದಿದ ಡಾ. ನವೀನ್ ಅವರನ್ನು ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ ಸನ್ಮಾನಿಸಿದರು.
ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾ.ನವೀನ್ ಮಾತನಾಡಿ, ನಿಮ್ಮೆಲ್ಲರ ಪ್ರೋತ್ಸಾಹ, ಸಹಕಾರದಲ್ಲಿ ಮುಂದಿನ ದಿನಗಳಲ್ಲೂ ಹೆಚ್ಚಿನ ಸೇವೆ ನೀಡುವುದಾಗಿ ತಿಳಿಸಿದರು.

ಸನ್ಮಾನಿಸಿದ ಅಂತಾರಾಷ್ಟ್ರೀಯ ಜಾನಪದ ಗಾಯನ ಸಿ.ಎಂ.ನರಸಿಂಹಮೂರ್ತಿ ಮಾತನಾಡಿ, ಚಾಮರಾಜನಗರ ವ್ಯದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಚರ್ಮರೋಗ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪರಾಗಿ ಸೇವೆ ಸಲ್ಲಿಸಿ ಮುಖ್ಯಸ್ಥರಾಗಿ ಡಾ. ನವೀನ್ ಅವರು ಬಡ್ತಿ ಹೊಂದಿರುವುದು ತುಂಬಾ ಸಂತಸವಾಗಿದೆ ಎಂದರು.
ವೈದ್ಯರ ಸೇವೆ ನಿಸ್ವಾರ್ಥ, ತ್ಯಾಗಮಯ ಮತ್ತು ಮಾನವೀಯತೆಯ ಪ್ರತೀಕವಾಗಿದ್ದು, ‘ವೈದ್ಯೋ ನಾರಾಯಣೋ ಹರಿ’ ಎಂಬಂತೆ ಪ್ರಾಣ ಉಳಿಸುವ ಅವರ ಪಾತ್ರ ಅನನ್ಯ. ರೋಗಿಗಳಿಗೆ ಚಿಕಿತ್ಸೆ ನೀಡಿ, ಸಾಂತ್ವನ ಹೇಳಿ, ಆರೋಗ್ಯಯುತ ಜೀವನಕ್ಕೆ ದಾರಿ ಮಾಡಿಕೊಡುವ ವೈದ್ಯರ ಬದ್ಧತೆ ಮತ್ತು ಸಹಾನುಭೂತಿ ಸಮಾಜಕ್ಕೆ ಅಮೂಲ್ಯವಾಗಿದೆ. ಬಡವರಿಗೆ ಆರೋಗ್ಯ ಸೇವೆ ನೀಡುತ್ತಿರುವ ಡಾ.ನವೀನ್ ಅವರಿಗೆ ಮುಂದಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಲಬಿಸಲಿ ಎಂದು ಆಶಿಸಿದರು.
ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ ಮಾತನಾಡಿ,  ಡಾ.ನವೀನ್ ಅವರು ಚಾಮರಾಜನಗರ ಆಸ್ಪತ್ರೆಯಲ್ಲಿ ಪ್ರಥಮ ಚರ್ಮರೋಗ ವಿಭಾಗದಲ್ಲಿ ಸೇವೆ ಆರಂಭಿಸಿ ಉತ್ತಮ ಸೇವೆ ಸಲ್ಲಿಸಿ ಇಂದು ಚರ್ಮರೋಗ ವಿಭಾಗದಲ್ಲಿ ಮುಖ್ಯಸ್ಥರಾಗಿ ಬಡ್ತಿ ಹೊಂದಿದ್ದಾರೆ. ಅವರು ಮತ್ತಷ್ಟು ಜನಸೇವೆ ಮಾಡಲಿ,ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಹುದ್ದೆ ಅಲಂಕರಿಸಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಸಿ.ಎನ್.ಸಂಪತ್ ಕುಮಾರ್, ಶಿವಕುಮಾರ್  ಇತರರು ಹಾಜರಿದ್ದರು.

Leave a Reply

Your email address will not be published. Required fields are marked *