
ಚಾಮರಾಜನಗರ: ಮೈಸೂರಿನ ರಾಜ್ ಕುಮಾರ್ ಕಲಾ ಸೇವಾ ಟ್ರಸ್ಟ್ ವತಿಯಿಂದ ಕೊಡಲ್ಪಡುವ ಡಾ.ರಾಜ್ ಕಲಾ ಸೇವಾರತ್ನ ಪ್ರಶಸ್ತಿಯನ್ನು ಮಯೂರ್ ಅವರಿಗೆ ಪ್ರದಾನ ಮಾಡಲಾಯಿತು.
ಮೈಸೂರಿನಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಡಾ.ರಾಜ್ ಕುಮಾರ್ ರವರ 98 ನೇ ಜಯಂತೋತ್ಸವದಲ್ಲಿ ಮಯೂರ್
ಅವರಿಗೆ ಡಾ.ರಾಜ್ ಕಲಾ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ.ರಾಜ್ ಕುಮಾರ್ ಕಲಾ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಅಧ್ಯಕ್ಷ ಬಿ.ಎಸ್.ಜಯರಾಮರಾಜು ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.