ಚಾಮರಾಜನಗರ: ಬಡವ, ಶ್ರೀಮಂತ ಎಂಬ ಭೇದ ಭಾವವಿಲ್ಲದೆ ಬೆಳಗುವ ಜ್ಯೋತಿ ಎಂದರೆ ಶಿಕ್ಷಣ ಮಾತ್ರ. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಾಹಿತಿ ಮತ್ತು ಚಿಂತಕರಾದ ಸೋಮಶೇಖರ ಬಿಸಲ್ವಾಡಿ ಅವರು ಸಲಹೆ ಮಾಡಿದರು.
ಭೋಗಾಪುರದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾತೆ ಸಾವಿತ್ರಿ ಬಾಯಿ ಫುಲೆ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕøತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನಕ್ಕಿಂತ ಮಿಗಿಲಾದದ್ದು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಜ್ಞಾನ ಪಡೆಯಬೇಕು. ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಂಡರೆ ಮುಂದಿನ ಬದುಕು ಹಸನಾಗಲಿದೆ. ಕಲಿಕೆಯ ಸಮಯದಲ್ಲಿ ಮಾನವಿಯತೆಯನ್ನು ಮೈಗೂಡಿಸಿಕೊಳ್ಳಬೇಕು. ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆಯೂ ಸಹ ಮುಖ್ಯವಾಗಲಿದೆ. ಜನಪದ ಶ್ರೀಮಂತಿಕೆ ಅಭಿವ್ಯಕ್ತಗೊಳಿಸಲು ಸಾಂಸ್ಕøತಿಕ ಕಾರ್ಯಕ್ರಮಗಳ ವೇದಿಕೆ ನೆರವಾಗಲಿವೆ. ವಿದ್ಯಾರ್ಥಿಗಳು ಈ ಎಲ್ಲ ಚಟುವಟಿಕೆಗಳಲ್ಲಿ ಆಸಕ್ತರಾಗಬೇಕೆಂದು ಸೋಮಶೇಖರ ಬಿಸಲ್ವಾಡಿ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ವಿದ್ಯಾರ್ಥಿಗಳು ಶಿಕ್ಷಣದ ಮೌಲ್ಯವನ್ನು ತಿಳಿದುಕೊಳ್ಳುವುದರ ಜೊತೆಗೆ ಸಾಂಸ್ಕøತಿಕ ಬೆಳವಣಿಗೆಗೆ ಮುಂದಾಗಬೇಕಿದೆ. ಸಾಂಸ್ಕøತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಗಟ್ಟಿಗೊಳಿಸುವುದಕ್ಕೆ ನೆರವಾಗುತ್ತದೆ. ಅತಿ ಹೆಚ್ಚು ಯುವ ಸಮುದಾಯವನ್ನು ಹೊಂದಿರುವ ರಾಷ್ಟ್ರ ನಮ್ಮದಾಗಿದೆ. ಯುವ ಸಮುದಾಯ ನಡೆ ಉತ್ತಮವಾಗಿರಬೇಕು ಎಂದರು.
ಪ್ರಾಧ್ಯಪಕರಾದ ಡಾ. ರಮೇಶ್ ಬಾಬು ಅವರು ಮಾತನಾಡಿ ಜ್ಞಾನವೆಂಬುದು ನಿರಂತರವಾದದ್ದು, ಜ್ಞಾನವೆಂದರೆ ಅರಿವು. ಇದನ್ನು ಅರಿತು ವಿದ್ಯಾರ್ಥಿಗಳು ಶ್ರದ್ದೆಯಿಂದ ಕಲಿಯಬೇಕು. ಪ್ರತಿಭಾವಂತರಾಗಿ ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಭೋಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರೂಪ, ಗ್ರಾಮ ಪಂಚಾಯಿತಿ ಮಾಜಿ ಉಪಧ್ಯಾಕ್ಷರಾದ ನಾಗು ಜಯಶಂಕರ್ ಮೂರ್ತಿ, ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಎಂ. ನಂಜುಂಡಯ್ಯ, ಯು.ಯು.ಸಿ.ಎಂ.ಎಸ್ ಮತ್ತು ಪ್ಲೇಸ್‍ಮೆಂಟ್ ಸೆಲ್ ಸಂಚಾಲಕರಾದ ಟಿ.ಆರ್. ಗಿರೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Like this:
Like Loading...
Related