ನಗರದಲ್ಲಿ ಆರಕ್ಷಕರ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

  • ಮಕ್ಕಳ ಪ್ರತಿಭೆ ಬೆಳವಣಿಗೆಗೆ ಪ್ರೊತ್ಸಾಹ ಅಗತ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್

ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಕಲ್ಯಾಣ ಕಾರ್ಯಕ್ರಮದಡಿ ಆಯೋಜಿಸಲಾದ “ಆರಕ್ಷಕರ ಮಕ್ಕಳ ಬೇಸಿಗೆ ಶಿಬಿರ–2026”ಕ್ಕೆ ಇಂದು ಡಿಎಆರ್ ಕೇಂದ್ರಸ್ಥಾನ ಆವರಣದ ಪೊಲೀಸ್ ಭವನದಲ್ಲಿ ಚಾಲನೆ ನೀಡಲಾಯಿತು.

   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬೇಸಿಗೆ ಶಿಬಿರದಲ್ಲಿ ವಿವಿಧ ಸಾಂಸ್ಕøತಿಕ, ಕ್ರೀಡಾ ಹಾಗೂ ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಹೆಚ್ಚು ಪ್ರೋತ್ಸಾಹದಾಯಕ  ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅವರ ಜ್ಞಾನ ಮತ್ತು ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

  ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಆಸಕ್ತಿ ವಹಿಸಿ ತಮ್ಮ ಪ್ರತಿಭೆಯನ್ನು ಬೆಳಗಿಸಬೇಕು. ಶಿಬಿರಗಳು ಮಕ್ಕಳ ಆತ್ಮವಿಶ್ವಾಸ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಅವರು ಹೇಳಿದರು.

  ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್‍ಪಿ ಸೋಮಣ್ಣ, ಕಲಾವಿದರಾದ ಕಿರಣ್ ಗಿರ್ಗಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *