ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಎನ್‍ರಿಚ್ ಮಹದೇವಸ್ವಾಮಿ ನೇಮಕ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಚಾ.ನಗರ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎನ್‍ರಿಎಚ್ ಮಹದೇವಸ್ವಾಮಿ ಅವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ರೈತರನ್ನು ಸಂಘಟನೆ ಮಾಡುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರೈತ ಪರವಾದ ಯೋಜನೆಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅವಧಿಯಲ್ಲಿ ಜಾರಿಯಾದ ರೈತರ ಕಲ್ಯಾಣಕ್ಕೆ ಜಾರಿ ಮಾಡಿರುವ ಕಾರ್ಯಕ್ರಮಗಳು ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಬಿಜೆಪಿ ರೈತ ಮೋರ್ಚಾವನ್ನು ಸಂಘಟನೆ ಮಾಡುವ ದೃಷ್ಟಿಯಿಂದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ತಾವು ಇಂದಿನಿಂದಲೇ ಸಕ್ರಿಯವಾಗಿ ಪಕ್ಷ ಸಂಘಟನೆ ಮಾಡುವ ದಿಕ್ಕಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಎನ್‍ರಿಎಚ್ ಮಹದೇವಸ್ವಾಮಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದು, ಸಹಕಾರ ಪ್ರಗೋಷ್ಠದ ಸಂಚಾಲಕರಾಗಿ ಸಹಕಾರಿ ಕ್ಷೇತ್ರದ ಬಲವರ್ಧನೆ ಮಾಡಿದ್ದರು. ವಿವಿಧ ಮೋರ್ಚಾಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದರು. ಈಗ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *