ಚಾಮರಾಜನಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿದ್ದು, ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಪರಿಶೀಲಿಸಲು ಜಿಲ್ಲೆಯ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರು ಮುಂದಾಗಬೇಕಿದೆ. ಹೀಗಾಗಿ ಪ್ರತೀ ತಾಲೂಕಿಗು ಉಪಾಧ್ಯಕ್ಷರಿಗೆ ಜವಾಬ್ದಾರಿ ನೀಡಿ ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸಬೇಕು. ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಗ್ರಾಮ ಸಭೆಗಳಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಶೀಲಿಸಬೇಕು. ಎಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗುತ್ತಿದೆ ಎಂಬುದನ್ನು ತಿಳಿದುಕೊಳಬೇಕು. ಯಾವುದಾದರೂ ತೊಡಕುಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು ಎಂದು ಉಪಾಧ್ಯಕ್ಷರು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿರುವ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದಲ್ಲಿ ಯೋಜನೆ ಪಡೆಯಬೇಕಿರುವ ಕುಟುಂಬದ ಮುಂದಿನ ಮುಖ್ಯಸ್ಥ ಫಲಾನುಭವಿಯ ಪ್ರಸ್ತಾವನೆಯನ್ನು ಸಲ್ಲಿಸಿ ಆ ಕುಟುಂಬಕ್ಕೆ ಗೃಹಲಕ್ಷ್ಮಿ ಸೌಲಭ್ಯ ತ್ವರಿತವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುವ ನಿಟ್ಟಿನಲ್ಲಿ ನಿರಂತರವಾಗಿ ಗಮನಿಸಬೇಕು ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರದೀಪ್, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಹೆಚ್.ಆರ್. ಸುರೇಶ್, ಕೆಎಸ್‍ಆರ್‍ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related