230 ಮಂದಿ ತಪಾಸಣೆ, 90 ಮಂದಿ ಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 230 ಮಂದಿ ತಪಾಸಣೆ ಮಾಡಿಸಿಕೊಂಡರು. 90 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು. ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ,ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುತ್ತಿರುವುದು ತುಂಬಾ ಸಂತಸವಾಗಿದ್ದು,ಮುಂದಿನ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಮಾನವನಿಗೆ ಕಣ್ಣುಗಳು ಅತ್ಯಂತ ಸೂಕ್ಷ್ಮ ಮತ್ತು ಅಮೂಲ್ಯವಾದ ಅಂಗವಾಗಿದ್ದು ಅದರ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು. ಶಿಬಿರದಲ್ಲಿ ರೋಟರಿ ಸಂಸ್ಥಾಪಕ ಸದಸ್ಯ ರಾದ ಸಿ.ವಿ.ಶ್ರೀನಿವಾಸಶೆಟ್ಟಿ, ಜಿ.ಆರ್.ಅಶ್ವಥ್ ನಾರಾಯಣ್, ಮಾಜಿ ಅಧ್ಯಕ್ಷ ಶ್ರೀನಿವಾಸನ್, ಎಲ್.ನಾಗರಾಜ, ಜಂಟಿ ಕಾರ್ಯದರ್ಶಿ ಜಿ.ಅಂಕಶೆಟ್ಟಿ, ಯೋಗರಾಜ್, ಅಬ್ದುಲ್ ಅಜೀತ್ ದೀನಾ, ರೋಟಿರಿಯನ್ ಸಿದ್ದಮಲ್ಲಪ್ಪ, ರಾಜು ವರ್ಗೀಸ್, ಎಸ್ ಆರ್ ಎಸ್ ಶ್ರೀನಿವಾಸ, ಚಂದ್ರಪ್ರಭಜೈನ್, ಮನೋಜ್ ಕುಮಾರ್, ಸವಿತಾ, ಪಿಆರ್ ಒ ವಿಜಯಕಾಂತ್ ಇತರರು ಹಾಜರಿದ್ದರು.