ರೈತರನ್ನು ಉದ್ಯಮಿಗಳಾಗಿ ಮಾಡಬೇಕು- ರೈತರಿಗೆ ಆರ್ಥಿಕ ಶಕ್ತಿ ತುಂಬಬೇಕು

  • ರಾಜ್ಯದ ರೈತರ ಬದುಕು ಉತ್ತವಾಗಿಸಲು 100 ಕೋಟಿ ಬಜೆಟ್ ನಲ್ಲಿ ಘೋಷಣೆ ; ಎನ್. ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳಾಗಿ ಮಾಡಬೇಕು ಅವರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧನೆ ಮಾಡಿ ಬ್ರಾಂಡ್ ಮಾಡಿ ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆ ಮಾಡಲಾಗಿದೆ ಈ ಉದ್ದೇಶದಿಂದ ರೈತರ ಶ್ರೇಯೋಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಹೇಳಿದರು.

ಇಂದು ನಗರದ ಸಿಲ್ವರ್ ಜೂಬಲಿ ಪಾರ್ಕ್ ನಲ್ಲಿ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆ ಕೃಷಿಗೆ ಪ್ರಧಾನವಾದ ಜಿಲ್ಲೆ ಯಾಗಿದೆ. ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲಾ ಅಭಿವೃದ್ಧಿಗೆ ಮತ್ತು ಯುವ ಸಮುದಾಯಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಕೃಷಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಹೆಚ್ಚು ಬೆಳೆಗಳನ್ನು ಬೆಳೆಯಲಾಗಿದ್ದು ಉತ್ಪಾದನಾ ಪೂರಕ ಬೆಳವಣಿಗೆ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಅವರು ಉತ್ತಮವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ ಈ ನಿಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನರಿಗೆ ಅನುಕೂಲ ಹೋಗುವಂತೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಾಲಿನ ಬಜೆಟ್ ಬಹಳ ಆರ್ಥಿಕ ಶಿಸ್ತಿನ ಬಜೆಟ್ ಆಗಿದ್ದು 4 ಲಕ್ಷ 48 ಸಾವಿರದ ಬಜೆಟ್ ಇದಾಗಿದ್ದು 17ನೇ ಬಾರಿ ಬಜೆಟ್ ಮಂಡಿಸಿದ ಕೀರ್ತಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವಿವಿಧ ಇಲಾಖೆಗಳಿಂದ ವಿವಿಧ ರೀತಿಯ ಸೌಲತ್ತುಗಳನ್ನು ನೀಡಲಾಗುತ್ತಿದ್ದು ಜಿಲ್ಲೆಯ ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಮತ್ತು ಜಿಲ್ಲಾ ಅಭಿವೃದ್ಧಿಗೆ ಹೆಚ್ಚು ಶ್ರಮಿಸುತ್ತೇವೆ ಎಂದು ಹೇಳಿದರು.

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ಮಾರ್ಚ್ 8 (ನಾಳೆ)ರಂದು ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರವಿಕುಮಾರ್ ಅವರು ಸರ್ಕಾರದ ಸವಲತ್ತುಗಳನ್ನು ಯಾವುದೇ ದಲ್ಲಾಳಿಗಳು ಇಲ್ಲದೆ ಸಾರ್ವಜನಿಕರಿಗೆ ನೇರವಾಗಿ ನೀಡಲಾಗಿದೆ. ವಿವಿಧ ಇಲಾಖೆಗಳಿಂದ ಇಂದು ಸ್ಕೂಟರ್ ಹಾಗೂ ಕಾರ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಈ ಹಿಂದೆಯೂ ಕೂಡ ಫಲಾನುಭವಿಗಳಿಗೆ ಸ್ಕೂಟರ್, ಕಾರ್ ಹಾಗೂ ಹೊಲಿಗೆ ಯಂತ್ರ ಗಳನ್ನು ವಿತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮಂಡ್ಯ ನಗರ ಈಗ ಸ್ವಚ್ಛ ನಗರವಾಗಿ ಬದಲಾವಣೆ ಆಗಿದ್ದು ಉತ್ತಮ ರಸ್ತೆಗಳು ನಿರ್ಮಾಣವಾಗಿದೆ. ಮಂಡ್ಯದ ಅಭಿವೃದ್ಧಿಗಾಗಿ ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಿದ್ದೇವೆ. ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ನೂರು ಎಕರೆ ಜಮೀನನ್ನು ನೀಗಲಾಗಿದೆ ಎಂದು ತಿಳಿಸಿದರು.

ಒಕ್ಕಲಿಗ ಸಂಘ ನಿಗಮದ ಅಧ್ಯಕ್ಷರು ಎಂ.ಎಸ್ ಆತ್ಮಾನಂದ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ನಗರಸಭೆ ಆಯುಕ್ತರಾದ ಪಂಪಾಶ್ರೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *