ಚಾಮರಾಜನಗರ : ಕರ್ನಾಕಟ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ವತಿಯಿಂದ ಫೆ. 13 ರಂದು ವಿಶ್ವರೈತನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ನೆನಪಿನ ದಿನಾಚರಣೆ ಹಾಗೂ ರೈತ ಸಮಾವೇಶವನ್ನು ಚಾಮರಾಜನಗರ, ಗುಂಡ್ಲುಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎ.ಎಂ.ಮಹೇಶ್ ಪ್ರಭು ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ತಾಲೂಕಿನ ಹೊಂಡರಬಾಳು ಅಮೃತ ಭೂಮಿಯಲ್ಲಿರುವ ಪ್ರೊ.ನಂಜುಂಡಸ್ವಾಮಿ ಸ್ಮಾರಕಕ್ಕೆ ಬೆಳಿಗ್ಗೆ 8ಕ್ಕೆ ಮಾಲಾರ್ಪಣೆ ಮಾಡಲಾಗುವುದು ನಂತರ ತೆಂಗು ಸಂಸ್ಕರಣಾ ಘಟಕದಲ್ಲಿರುವ ಎಂಡಿಎನ್ ಪತ್ಥಳಿಗೆ ಬೆಳಿಗ್ಗೆ 9 – 30 ಕ್ಕೆಮಾಲಾರ್ಪಣೆ ಮಾಡಲಾಗುವುದು ತದನಂತರ ಗುಂಡ್ಲುಪೇಟೆ ಹಳೆ ಬಸ್ ಸ್ಟ್ಯಾಂಡ್ ಆವರಣದಲ್ಲಿ ಬೆಳಿಗ್ಗೆ 11-30 ಗಂಟೆಗೆ ನೆನಪಿನ ದಿನಾಚರಣೆ, ರೈತ ಸಮಾವೇಶ ಕಾರ್ಯಕ್ರಮ ನಡೆಯುತ್ತದೆ. ಕಾರ್ಯಕ್ರಮದಲ್ಲಿ ಸರ್ಕಾರಕ್ಕೆ ನಾನಾ ಹಕ್ಕೋತ್ತಾಯಗಳನ್ನು ಮಂಡಿಸಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘ ಗೌರವಾಧ್ಯಕ್ಷರಾದ ಚಾಮರಾಸ ಮಾಲೀ ಪಾಟೀಲ್ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾಯಾಧ್ಯಕ್ಷರಾದ ಎ.ಎಂ.ಮಹೇಶ್ ಪ್ರಭು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಭಾಗೀಯ ಕಾರ್ಯದರ್ಶಿಯಾದ ಜ್ಯೋತಿಗೌಡನಪುರ ಸಿದ್ಧರಾಜು ಪ್ರಾಸಾವಿಕ ಭಾಷಣ ಮಾಡಲಿದ್ದಾರೆ. ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ
ರೈತಬಾಂಧವರು, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಯುವ ಘಟಕದ ಪದಾಧಿಕಾರಿಗಳು ರೈತ ಸಂಘಟನೆಯ ಮಹಿಳಾ ಪದಾಧಿ ಕಾರಿಗಳು, ಜಿಲ್ಲೆಯ ఎల్లా ಗ್ರಾಮ ಘಟಕ ದ ಪದಾಧಿಕಾರಿಗಳು, ಕಾರ್ಯಕರ್ತರು,, విద్యాధిεగళు, ನಾಗರೀಕ ಬಂದುಹಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ
ಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ನಾಗರೀಕ ಬಂಧುಗಳು
ಪ್ರೊ.ನಂಜುಂಡಸ್ವಾಮಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಆಗ್ರಹ : ಕರ್ನಾಟಕ ರಾಜ್ಯ ರೈತ ಸಂಘದ ಖಾಯಂ ಆಹ್ವಾನಿತ ಹೆಗ್ಗವಾಡಿಪುರ ಮಹೇಶ್ ಮಾತನಾಡಿ, ವಿಶ್ವರೈತ ಚೇತನ ಪ್ರೊ.ನಂಜುಂಡಸ್ವಾಮಿ ಅವರು ನಮ್ಮನ್ನು ಅಗಲಿ 22 ವರ್ಷಗಳಾಗಿದ್ದರು ಕೂಡ ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕಿತ್ತು ನೀಡಿಲ್ಲ. ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕಕ್ಕೆ ಸೇರಿಸಬೇಕು. ಭಾರತರತ್ನ ಪ್ರಶಸ್ತಿ ಘೋಷಿಸಬೇಕು. ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ. ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರಮಹದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಯುವ ಘಟಕದ ರಾಜ್ಯ ಸಂಚಾಲಕ ಜ್ಯೋತಿಗೌಡನಪುರ ಯಶವಂತ, ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಯ್ಯನಪುರ ಶಿವಣ್ಣ, ಗುಂಡ್ಲುಪೇಟೆ ತಾಲೂಕು ಉಪಾಧ್ಯಕ್ಷ ನಾಗರಾಜು ಹಾಜರಿದ್ದರು.