- ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಚಾಮರಾಜನಗರ: ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಗಳು ಭಕ್ತಿಭಾವದಿಂದ ನಡೆದು, ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಉತ್ಸವಮೂರ್ತಿ ಸರಸ್ವತಿ ಅಮ್ಮನವರಿಗೆ ವಿಶೇಷ ಪೂಜೆ ಮಾಡಲಾಗಿತ್ತು.

ನಿಂಬೆಹಣ್ಣಿನ ಆರತಿ ಬೆಳಗಿದ ಸುಮಂಗಲಿಯರು: ಚಾಮುಂಡೇಶ್ವರಿ ಅಮ್ಮನವರಿಗೆ ಮಂಗಲಿಯರು ನಿಂಬೆಹಣ್ಣಿನ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು. ಕೌಮಾರಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು.
ಮುಂಜಾನೆಯಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಆಗಮಿಕ ನಾಗರಾಜದೀಕ್ಷಿತ್ ಪ್ರಜಾಪವರ್ ಟಿವಿಯೊಂದಿಗೆ ಮಾತನಾಡಿ, ಆಷಾಢ ಮಾಸದ ಮೊದಲ ಶುಕ್ರವಾರದ ಪ್ರಯುಕ್ತ ದೇವಿಗೆ ಕೌಮಾರಿ ಅಲಂಕಾರ ಮಾಡಲಾಗಿದೆ. ಏಕವಾರ,ರುದ್ರಾಭಿಷೇಕ, ಫಲಪಂಚಾಮೃತ ಅಭಿಷೇಕ, ಲಲಿತಾ ಸಹಸ್ರನಾಮ , ಖಡ್ಗಮಾಲ ಆರ್ಚನೆ ಮಹಾಮಂಗಳಾರತಿ ನೆರವೇರಿಸಿ ಬೆಳಿಗ್ಗೆ 6.15 ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಮೊದಲ ಆಷಾಢ ಶುಕ್ರವಾರದಂದು ನಿಂಬೆಹಣ್ಣಿನ ಆರತಿ ಬೆಳಗಿರುವುದು ಅತ್ಯಂತ ಶ್ರೇಷ್ಠ ಮತ್ತು ಮಂಗಳಕರ. ಆಷಾಢ ಮಾಸದಲ್ಲಿ ದೇವಿಗೆ ಈ ಆರತಿ ಮಾಡುವುದರಿಂದ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಎಂದರು.