- ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ
ಚಾಮರಾಜನಗರ, ಆಗಸ್ಟ್ 27 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯ ಐದು ತಾಲೂಕುಗಳು ತೀವ್ರ ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಿದ್ದು, ಈ ಸಂಬಂಧ ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಮಳೆಯ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರವು ಅವಲೋಕಿಸಿ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಈ ಪೈಕಿ ಚಾಮರಾಜನಗರ ಜಿಲ್ಲೆಯ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ತಾಲೂಕುಗಳು ತೀವ್ರ ಬರಪೀಡಿತ ತಾಲೂಕುಗಳಾಗಿ ಘೋಷಣೆಯಾಗಿವೆ.
ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕುಡಿಯುವ ನೀರು, ಮೇವು ಲಭ್ಯತೆ ಸೇರಿದಂತೆ ಇನ್ನಿತರೆ ಬರ ಪರಿಹಾರ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದ್ಧಾರೆ.