ಕಣ್ಣುಗಳ ಆರೋಗ್ಯದತ್ತ ಗಮನಹರಿಸಿ: ಕಾಗಲವಾಡಿ ಚಂದ್ರು

  • ರೋಟರಿ ಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
  • 415ಮಂದಿ ತಪಾಸಣೆ, 220 ಮಂದಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ  ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ  415 ಮಂದಿ ತಪಾಸಣೆ ಮಾಡಿಸಿಕೊಂಡರು. 220 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ  ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.
ರೋಟರಿ ಸಂಸ್ಥಾಪಕ ಸದಸ್ಯ ಸಿ.ವಿ.ಶ್ರೀನಿವಾಸಶೆಟ್ಟಿ ಮಾತನಾಡಿ, ರೋಟರಿ ಸಂಸ್ಥೆಯು  ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು,  ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ  ಶಿಬಿರದ ಪ್ರಯೋಜನ ಪಡೆಯುತ್ತಿರುವುದು ತುಂಬಾ ಸಂತಸವಾಗಿದ್ದು,ಮುಂದಿನ ಶಿಬಿರದ  ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಈ ಬಾರಿ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಸಾರ್ವಜನಿಕರು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡಿದ್ದು 220 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಕೊಂಡಿದ್ದಾರೆ. ರೋಟರಿ ಸಂಸ್ಥೆಯು  ಸೇವೆ ಮಾಡಲು ಸಿದ್ದವಿದ್ದು,  ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕಣ್ಣಿನ ಆರೋಗ್ಯದ ಕಡೆ ಗಮನಹರಿಸುವುದು ಇಂದಿನ ಡಿಜಿಟಲ್ ಯುಗದಲ್ಲಿ ಅತ್ಯಗತ್ಯವಾಗಿದೆ. ಈ ಶಿಬಿರಕ್ಕೆ ಹೊರ ಜಿಲ್ಲೆಗಳಿಂದ ಜನತೆ ಬರುತ್ತಿದ್ದು,  ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಶಿಬಿರದಲ್ಲಿ ರೋಟರಿ ಸಂಸ್ಥೆಯ ಸಂಸ್ಥಾಪಕ ಸದಸ್ಯ ಅಶ್ವಥ್ ನಾರಾಯಣ್,  ಮುಂದಿನ ಸಾಲಿನ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಮಾಜಿ ಅಧ್ಯಕ್ಷರಾದ ನಾಗರಾಜು, ಯೋಗರಾಜು, ಎ.ಶ್ರೀನಿವಾಸನ್, ಸುರೇಶ್, ಎಸ್ ಆರ್ ಎಸ್ ಶ್ರೀನಿವಾಸ, ಕೆಂಪನಪುರ ಮಹಾದೇವಸ್ವಾಮಿ,
ಸುರೇಶ್ ಕುಮಾರ್, ಮುಂದಿನ ಸಾಲಿನ ಕಾರ್ಯದರ್ಶಿ ಅಂಕಶೆಟ್ಟಿ, ಸಿದ್ದಮಲ್ಲಪ್ಪ, ನೇಮಿರಾಜ್,
ಸವಿತಾ, ಪಿಆರ್ ಓ ವಿಜಯಕುಮಾರ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *