ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ಪ್ರಥಮ ಬಾರಿಗೆ ‘ಸಮಾಧಾನ ಸಮಾರೋಹ-2026’ ಕುರಿತವಿಶೇಷ ಲೋಕ್ ಅದಾಲತ್ ಆಯೋಜನೆ

ಚಾಮರಾಜನಗರ: ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ್ ಅದಾಲತ್ ಅನ್ನು ಭಾರತದ ಸರ್ವೋಚ್ಛ ನ್ಯಾಯಾಲಯವು 2026ರ ಆಗಸ್ಟ್ 21, 22 ಮತ್ತು 23ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ತಿಳಿಸಿದರು.

   ಕರ್ನಾಟಕ ಉಚ್ಛ ನ್ಯಾಯಾಲಯದ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. 

   ಸುಪ್ರೀಂ ಕೋರ್ಟ್ ಇದೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ 'ಸಮಾಧಾನ ಸಮಾರೋಹ-2026' ಎಂಬ ವಿಶೇಷ ಲೋಕ್ ಅದಾಲತ್ ಅನ್ನು ಆಯೋಜಿಸಿದೆ. ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೂ ಸಹ ಈ ಲೋಕ್ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

   ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವು ವಾಸವಿರುವ ತಾಲ್ಲೂಕು, ಜಿಲ್ಲಾಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿ ಕೊಳ್ಳಬಹುದಾಗಿದೆ ಎಂದು ತಿಳಿಸಿದರು.

  ಪ್ರಸ್ತುತ ಸುಪ್ರೀಂ ಕೋರ್ಟ್ ಪ್ರಮುಖವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರೀಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು ವಿವಾದಗಳು, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಿದೆ ಎಂದರು. 

    ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಲಾಗಿದ್ದು, ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 1,245 ಬಾಕಿಯಿದ್ದು,  ಚಾಮರಾಜನಗರ ಜಿಲ್ಲೆಯ 8 ಪ್ರಕರಣಗಳು ಒಳಗೊಂಡಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಗುರುತಿಸಲಾದ ಪ್ರಕರಣಗಳಲ್ಲಿ 937ಕ್ಕೂ ಹೆಚ್ಚು ಪ್ರಕರಣಗಳು ಸರ್ಕಾರವು ಪಕ್ಷವಾಗಿರುವ ಪ್ರಕರಣಗಳಾಗಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಲು ಮತ್ತು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗುವಂತೆ ಮಾನ್ಯ ಅಡ್ವಕೇಟ್ ಜನರಲ್ ಅವರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು. 


  ಆಸಕ್ತ ಕಕ್ಷಿದಾರರು ಅಥವಾ ಅವರ ವಕೀಲರು ಸರ್ವೋಚ್ಚ ನ್ಯಾಯಾಲಯದ ವೆಬ್‍ಸೈಟ್‍ನಲ್ಲಿ ನೀಡಲಾದ ಗೂಗಲ್ ಫಾರ್ಮ್ https://forms.gle/jqxefqF4BCWzukoP6 ;ಮೂಲಕ ಮೇ 31, 2026 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೋಟಿಸ್ ಪಡೆದ ಕಕ್ಷಿದಾರರು ತಾವಿರುವ ಜಿಲ್ಲಾ ಅಥವಾ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಮುಂದೆ ಖುದ್ದಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಂಧಾನ ಸಭೆಗಳಿಗೆ ಹಾಜರಾಗಬಹುದು.

   ಭಾರತದ ಸರ್ವೋಚ್ಚ ನ್ಯಾಯಾಲಯದ ಒನ್ ಸ್ಟಾಪ್ ಕೇಂದ್ರದ ಸಂಪರ್ಕ ಸಂಖ್ಯೆ: 011-23112428, 011-23112528, 011-23116464, 011-23116465, 011-23115652. ಇಮೇಲ್: speciallokadalat2026 @sci.nic.in., ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕ ಸಂಖ್ಯೆ: 011-23382778, 011-23382121 ಹಾಗೂ ಟೋಲ್ ಫ್ರೀ ಸಂಖ್ಯೆ. 15100, ಸರ್ವೋಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಸಂಪರ್ಕ ಸಂಖ್ಯೆ: 011-23381257, 211-23116353, 011-23116354. ಇಮೇಲ್:sclsc@nic.in , ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಂಪರ್ಕ ಸಂಖ್ಯೆ: 080-22111729, 080-22111714. ಇಮೇಲ್:samadhansamaroh@gmail.com ಹಾಗೂ ಟೋಲ್ ಫ್ರೀ ಸಂಖ್ಯೆ: 15100 (24*7), ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ, ಬೆಂಗಳೂರು ಸಂಪರ್ಕ ಸಂಖ್ಯೆ: 080-22869988. ಇ-ಮೇಲ್:hclscbng@gmail.com ಗೆ ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬಹುದು ಎಂದು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಅವರು ತಿಳಿಸಿದರು.

  ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಆರ್ ದೇವದಾಸ್ ಅವರು ಮಾತನಾಡಿ ಈ ವಿಶೇಷ ಲೋಕ ಅದಾಲತ್ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮಹತ್ವದ ಅವಕಾಶವಾಗಿದೆ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದಲ್ಲದೆ ಉಭಯ ಪಕ್ಷಗಳ ನಡುವೆ ಸೌಹಾರ್ದ ಸಂಬಂಧ ಉಳಿಯಲು ಸಹಕಾರಿಯಾಗಲಿದೆ. ಸಾರ್ವಜನಿಕರು ಈ ಅದಾಲತ್ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿಂದು ವರ್ಚುವೆಲ್ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಪತ್ರಿಕಾ ಗೋಷ್ಠಿಯನ್ನು ವೀಕ್ಷಿಸಿದರು.

Leave a Reply

Your email address will not be published. Required fields are marked *