- 270 ಮಂದಿ ತಪಾಸಣೆ,102 ಮಂದಿ ಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ
ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 270 ಮಂದಿ ತಪಾಸಣೆ ಮಾಡಿಸಿಕೊಂಡರು. 102 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.
ರೋಟರಿ ಸಂಸ್ಥಾಪಕ ಸದಸ್ಯ ಸಿ.ವಿ.ಶ್ರೀನಿವಾಸಶೆಟ್ಟಿ ಮಾತನಾಡಿ, ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುತ್ತಿರುವುದು ತುಂಬಾ ಸಂತಸವಾಗಿದ್ದು,ಮುಂದಿನ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ರೋಟರಿ ಸಂಸ್ಥೆಯ ಚಂದ್ರಪ್ರಭಜೈನ್, ಸಿ.ಎ.ನಾರಾಯಣ್, ಎಲ್.ನಾಗರಾಜು, ರಾಜುವರ್ಗೀಸ್, ಮನೋಜ್, ಇತರರು ಹಾಜರಿದ್ದರು.