ಸಾಲಿಗ್ರಾಮದಲ್ಲಿ ಜ. 31ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಪಟ್ಟಣದ ಚಂದನ ಪಾಲಿ ಕ್ಲಿನಿಕ್ ವತಿಯಿಂದ ಜೆ ಎಸ್ ಎಸ್ ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳಿಂದ ಪ್ರತಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತದೊತ್ತಡ ಮತ್ತು ಮಧುಮೇಹ ಉಚಿತ ತಪಾಸಣಾ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ ಎಂದು ಚಂದನ ಪಾಲಿ ಕ್ಲಿನಿಕ್ ನ ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲಿಗ್ರಾಮ ಪಟ್ಟಣದ ಮಹಾವೀರ ರಸ್ತೆಯಲ್ಲಿರುವ ಚಂದನ ಪಾಲಿ ಕ್ಲಿನಿಕ್ ನಲ್ಲಿ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞ ವೈದ್ಯರಾದ
ಡಾ.ಆರ್‌.ಪಿ.ಶೃಂಗ ಮತ್ತು ಫಿಜಿಷಿಯನ್ ಮತ್ತು ರಕ್ತದೊತ್ತಡ, ಮಧುಮೇಹ ತಜ್ಞ ವೈದ್ಯರಾದ ಡಾ.ಜೆ.ಶ್ರೀ ಹರ್ಷ ಅವರುಗಳಿಂದ ಪ್ರತಿ ಶನಿವಾರ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯ ವರೆಗೆ ಒಂದು ತಿಂಗಳುಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದೊತ್ತಡ ಮತ್ತು ಮಧುಮೇಹ ಉಚಿತ ತಪಾಸಣಾ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಬಿರದ ಸಂಘಟಕ ಗೋಪಾಲ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *