- ರಾಮಸಮುದ್ರದಲ್ಲಿ ಧಮ್ಮಪಯಣ ಜಾಥಗೆ ಅದ್ಧೂರಿ ಸ್ವಾಗತ ಬುದ್ಧವಂದನೆ, ಮೊಂಬತ್ತಿ ಬೆಳಗಿ, ಹೂ ಮಳೆಯೊಂದಿಗೆ ಜಾಥಾ ಸ್ವಾಗತಿಸಿ ಬರಮಾಡಿಕೊಂಡ ಗ್ರಾಮಸ್ಥರು.
ಚಾಮರಾಜನಗರ : ಜಿಲ್ಲೆಯಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಧಮ್ಮ ಪಯಣ ಜಾಗೃತಿ ಜಾಥಾವನ್ನು ರಾಮಸಮುದ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗಕ್ಕೆ ಆಗಮಿಸಿದ ಧಮ್ಮಪಯಣ ಜಾಗೃತಿ ಜಾಥಾ ಸ್ಥಬ್ದಚಿತ್ರಕ್ಕೆ ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಖಾತೆ ಸಚಿವರು,ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಅಂತರಾಷ್ಟ್ರೀಯ ಬೌದ್ಧಸಮ್ಮೇಳನ ಆಚರಣಾ ಸಮಿತಿ ಗೌರವಾಧ್ಯಕ್ಷ ಮನೋರಕ್ಕಿತ ಬಂತೇಜಿ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮೊಂಬತ್ತಿ ಬೆಳಗಿ ಪುಷ್ಪವೃಷ್ಠಿಯೊಂದಿಗೆ ಸ್ವಾಗತಿಸಿ ಬರಮಾಡಿಕೊಂಡರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಮುಕ್ತಾಯಗೊಂಡಿತು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಪುಷ್ಪಾರ್ಚನೆ ಮಾಡಿ ಮಾತನಾಡಿ, ಕಳೆದ ವರ್ಷ ಮೈಸೂರಿನಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ಯಶಸ್ವಿಯಾಗಿದೆ’ ನಡೆದಿದೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ
ಅ.24, 25 ರಂದು ಎರಡು ದಿನಗಳ ಕಾಲ ಐತಿಹಾಸಿಕ ಬೌದ್ಧ ಸಮ್ಮೇಳನ ನಡೆಯುತ್ತಿರುವುದು ತುಂಬಾ ಸಂತಸವಾಗಿದೆ. ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 1956 ಅಕ್ಟೋಬರ್ 14 ರಂದು ನಾಗಪುರದಲ್ಲಿ ತಮ್ಮ
ಲಕ್ಷಾಂತರ ಮಂದಿ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದರು. ಅವರ ಆಶಯಗಳನ್ನು ಈಡೇರಿಸುವ ಕೆಲಸವನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಎಂದರು.
ಪ್ರಚಾರ ಸಮಿತಿ ಜಿಲ್ಲಾ ಸಂಚಾಲಕ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಭೌದ್ಧ ಸಮ್ಮೇಳನ ಮಾಡುವ ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಅ.24 ಮತ್ತು 25 ರಂದು ಚಾಮರಾಜನಗರ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನಕ್ಕೆ ರಾಮಸಮುದ್ರ ಗ್ರಾಮದಿಂದ శాుటుంబ ಸಮೇತರಾಗಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿ ಮಾಡಿ ಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಯಜಮಾನರಾದ ನಾಗರಾಜು,
ಪಾಪಯ್ಯ, ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಆರ್.ಮಹದೇವು,
ಮುಖಂಡರಾದ ಕೆ.ನಾಗಣ್ಣ, ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಸುಹಾಸ್, ಪ್ರಧಾನ
ಕಾರ್ಯದರ್ಶಿ ಮನೋಜ್ ಮಸ್ ಹಾಗೂ ಪದಾಧಿಕಾರಿಗಳು, ದಿವ್ಯಚೇತನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್, ಹಾಗೂ ಪದಾಧಿಕಾರಿಗಳು, ಮುಖಂಡರಾದ ಪ್ರಸನ್ನ, ರಾಜಪ್ಪ, ಮೋಹನ್ ನಗು, ಅಕ್ಷಯ್, ಎನ್ ಎಸ್ ಯುಐ ಸ್ವಾಮಿ, ಬ್ಯಾಡಮೂಡ್ಲು ಬಸವಣ್ಣ, ಸುಶೀಲ, ಜ್ಯೋತಿ, ಕುಮಾರ್ , ಉಪಾಸಕರು, ಉಪಾಸಕಿಯರು, ಗ್ರಾಮಸ್ಥರು ಭಾಗವಹಿಸಿದ್ದರು.
