ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಇಂದು ಯಳಂದೂರು ತಾಲ್ಲೂಕಿನ ಎ. ಕಂದಹಳ್ಳಿ, ಕೊಮರನಪುರ, ಆಲ್ಕೆರೆ ಆಗ್ರಹಾರ, ಅಂಬಳೆ ಮತ್ತು ಮಾಂಬಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವೀಡಿಯೋ ಸಂವಾದದಲ್ಲಿ ಸೂಚಿಸಿರುವ ಹಿನ್ನೆಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದರು.
ಯಳಂದೂರು ತಾಲ್ಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 49 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 38 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 33 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಪೈಕಿ 5 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.
ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮತ್ತು ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಅಳವಡಿಕೆ ಕುರಿತು ವರದಿಗಳನ್ನು ಪರಿಶೀಲಿಸಿ, ಗ್ರಾಮಗಳಲ್ಲಿರುವ ನೀರು ಸರಬರಾಜು ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಅಲ್ಲದೇ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
ಬಳಿಕ ಅಂಬಳೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ನರೇಗಾ ಕಾಮಗಾರಿಯನ್ನು ಪರಿಶೀಲಿಸಿ, ನರೇಗಾ ಕೂಲಿ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿದರು.
ನಂತರ ಮುಡಿಗುಂಡಂ ಗ್ರಾಮದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಶುದ್ದಿಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್. ಜಗದೀಶ್, ಸಹಾಯಕ ಎಂಜಿನಿಯರ್ ಎಂ. ಚಂದ್ರಶೇಖರ ಮೂರ್ತಿ, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಸಿ.ಎಂ. ಆಶಾ, ಇಲಾಖೆಯ ಇಂಜಿನಿಯರ್‍ಗಳಾದ ಸಿ.ಎಸ್. ಮಾನಸ, ಎಸ್. ಶಾಲಿನಿ, ಎಂ. ಅನುಶ್ರೀ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ರವೀಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
Like this:
Like Loading...
Related