ಚಾಮರಾಜನಗರ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆ, ಕಾರ್ಯಕ್ರಮ ಕಾಮಗಾರಿಯನ್ನು ನಿಗದಿತ ಕಾಲಾವಧಿ ಒಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಡಿ.8)ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಲೆಕ್ಕಾಧಿಕಾರಿಗಳು, ತಾಲೂಕು ಯೋಜನಾಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಇನ್ನಿತರ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿಗಳಲ್ಲಿನ ತೆರಿಗೆ ವಸೂಲಾತಿಯಲ್ಲಿ ಶೇ.100 ರಷ್ಟು ಪಗತಿ ಸಾಧಿಸಬೇಕು. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ನಿಗದಿತ ಸಮಯದೊಳಗೆ ಇ-ಹಾಜರಾತಿಯನ್ನು ನಮೂದು ಮಾಡಬೇಕು. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕಗಳ ಅನುμÁ್ಠನ ಪ್ರಗತಿಯನ್ನು ನಿಗದಿತ ಗುರಿಗನುಗುಣವಾಗಿ ಸಾಧಿಸಬೇಕು. ಅನುದಾನ ವ್ಯಪಗತವಾಗದಂತೆ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುμÁ್ಠನಗೊಳಿಸಲಾಗಿರುವ ವಿವಿಧ ಸಾಲಿನ ಕಾಮಗಾರಿಗಳಲ್ಲಿ ಅಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಮಾನವ ದಿನಗಳ ಸೃಜನೆಯ ಶೇ.100ರಷ್ಟು ಗುರಿಗನುಗುಣವಾಗಿ ಪ್ರಗತಿಯಾಗಬೇಕು. ಯೋಜನೆಯಡಿ ಬಾಕಿಯಿರುವ ಎಲ್ಲಾ ನೋಂದಾಯಿತ ಸಕ್ರಿಯ ಕೂಲಿಕಾರ್ಮಿಕರ ಇ-ಕೆವೈಸಿ ಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ನರೇಗಾ ಯೋಜನೆಯಡಿ ಅನುμÁ್ಠನಗೊಳಿಸಲಾಗಿರುವ ವಿವಿಧ ಶಾಲಾ ಅಭಿವೃದ್ಧಿ ಕಾಮಗಾರಿಗಳು ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಬೇಗನೆ ಪೂರ್ಣ ಮಾಡಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆ ನಿರ್ಮಾಣ ಸಂಬಂಧ ಬಾಕಿಯಿರುವ ಬಿಲ್ಲುಗಳನ್ನು ಪಾವತಿಸಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳ ವೇತನ ಪಾವತಿ ಸಂಬಂಧ ನಿಗದಿತ ಅವಧಿಯೊಳಗೆ ವೇತನ ಪಾವತಿಗೆ ಕ್ರಮ ತೆಗೆದುಕೊಳ್ಳಿ ಎಂದು ಜಿ.ಪಂ ಸಿಇಒ ತಿಳಿಸಿದರು.
ನಾರಿ-ಕಿಲ್ಫ್ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಸರ್ವೆ ಅಬ್ಜೆಕ್ಷನ್ ಬಗ್ಗೆ ನೀಡಲಾಗಿರುವ ವಿವರವನ್ನು ಗ್ರಾಮ ಪಂಚಾಯತಿಗಳ ಸ್ವಚ್ಛವಾಹಿನಿ ವಾಹನದ ಮೂಲಕ ಪ್ರಚಾರ ಮಾಡಬೇಕು. ವಾಹನ ಇಲ್ಲದಿದ್ದಲ್ಲಿ ಡಂಗುರ ಮೂಲಕ ಪ್ರಚಾರ ಮಾಡಿಸಲು ಅಗತ್ಯ ಕ್ರಮವಹಿಸಬೇಕು ಎಂದರು.
ಈ ಮಾಹೆಯ 20ನೇ ತಾರೀಖಿನೊಳಗಾಗಿ ಅತ್ಯಂತ ದುರ್ಬಲ ಕುಟುಂಬಗಳ ಪ್ರಾಥಮಿಕ ಪಟ್ಟಿಯನ್ನು ಗ್ರಾಮ ಸಭೆಯಲ್ಲಿ ಮಂಡಿಸಿ ತಾಲ್ಲೋಕು ಪಂಚಾಯಿತಿಗಳ ಮೂಲಕ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಹಾಗೂ ಮಾಹೆವಾರು ಗ್ರಾಮ ಪಂಚಾಯಿತಿ ಮಟ್ಟದ ಸಮಿತಿ ಸಭೆಯನ್ನು ನಡೆಸಿ ವರದಿಯನ್ನು ಸಲ್ಲಿಸಲು ಸೂಚಿಸಿದರು.
ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತಹ ಸಮಸ್ಯೆಗಳ ಪಟ್ಟಿ ಮಾಡಿ ಕಾಮಗಾರಿವಾರು ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಪರಿಹರಿಸಲು ತುರ್ತು ಕ್ರಮವಹಿಸುವಂತೆ ಕಾರ್ಯಪಾಲಕ ಅಭಿಯಂತರರಿಗೆ ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಸಹಾಯಕ ನಿರ್ದೇಶಕರಾದ ರಾಜೇಂದ್ರ ಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಶಾ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related