- ಶಾಲೆ, ಅಂಗನವಾಡಿಗೆ ಭೇಟಿ-ಕುಡಿಯುವ ನೀರಿನ ಯೋಜನೆ ಪರಿಶೀಲನೆ
ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಹಿಳಾ ಒಕ್ಕೂಟಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಜಾರಿಗೆ ತಂದಿರುವ ಮತ್ಸ್ಯ ಸಂಜೀವಿನಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.
ಚಾಮರಾಜನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮೀನುಗಾರಿಕೆ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಮತ್ಸ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಕುಟುಂಬ ನಿರ್ವಹಣೆಗೆ ಈ ಯೋಜನೆ ಸಹಕಾರಿಯಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೀನು ಕೃಷಿಯು ಒಂದು ಉಪಕಸುಬಾಗಿದ್ದು, ಅಗ್ಗದ ದರದಲ್ಲಿ ಉತ್ತಮ ಪೆÇ್ರೀಟಿನ್‍ಯುಕ್ತ ಆಹಾರ ದೊರೆಯುತ್ತಿದ್ದು, ಈಗಾಗಲೇ ಗುರುತಿಸಿರುವ ಕೆರೆಗಳಲ್ಲಿ ವ್ಯವಸ್ಥಿತವಾಗಿ ಮೀನುಕೃಷಿ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ತೊಡಗಿಸಿಕೊಳ್ಳುವ ಮೂಲಕ ಗ್ರಾಮೀಣ ಮಹಿಳೆಯರ ಸಬಲೀಕರಣವಾಗಬೇಕು ಎಂದು ಜಿ.ಪಂ ಸಿಇಒ ತಿಳಿಸಿದರು.
ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರ ಹಲವು ಯೋಜನೆಗಳನ್ನು ಅನುμÁ್ಠನಗೊಳಿಸಿದೆ. ಇದರ ಜೊತೆಗೆ ಈಗ ಮತ್ಸ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಒಕ್ಕೂಟಗಳನ್ನು ಸದೃಢಗೊಳಿಸಲು ಮುಂದಾಗಿದೆ. ಮೀನು ಸಾಕಾಣಿಕೆಯಿಂದ ಅಧಿಕ ಲಾಭ ಮತ್ತು ಹೆಚ್ಚು ಅನುಕೂಲವಾಗುತ್ತದೆ. ಹೀಗಾಗಿ ಮಹಿಳಾ ಸ್ವ-ಸಹಾಯ ಗುಂಪುಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಅಯ್ಯನಪುರ ಗ್ರಾಮದಲ್ಲೂ ಮತ್ಸ್ಯ ಸಂಜೀವಿನಿ ಯೋಜನೆಗೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರು ಚಾಲನೆ ನೀಡಿದರು. ಅಯ್ಯನಪುರ ಗ್ರಾಮದ ಅಯ್ಯನ ಕಟ್ಟೆ ಕೆರೆಗೆ 3920 ಮೀನು ಮರಿಗಳನ್ನು ಬೀಡುವ ಮೂಲಕ ಮತ್ಸ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಒಟ್ಟು 160 ಮಂದಿ ಮಹಿಳಾ ಸದಸ್ಯರನ್ನೊಳಗೊಂಡ 26 ಸ್ವ-ಸಹಾಯ ಗುಂಪುಗಳು ಮತ್ತು 26 ಕೆರೆಗಳನ್ನು ಮತ್ಸ್ಯ ಸಂಜೀವಿನಿ ಯೋಜನೆಗೆ ಆಯ್ಕೆ ಮಾಡಿ ಒಟ್ಟು 2 ಲಕ್ಷ ಮೀನು ಮರಿಗಳನ್ನು ಬಿಡುವ ಗುರಿಯನ್ನು ಹೊಂದಲಾಗಿದೆ.
ಅಯ್ಯನಪುರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿ.ಪಂ. ಸಿಇಒ ಮೋನಾ ರೋತ್ ಅವರು ವಿದ್ಯಾರ್ಥಿಗಳ ಹಾಜರಾತಿ ಹಾಗೂ ಮೂಲ ಸೌಲಭ್ಯಗಳನ್ನು ಪರಿಶೀಲಿಸಿ, ಕಲಿಕೆಯ ಬಗ್ಗೆ ವಿದ್ಯಾರ್ಥಿಗಳ ಜೊತೆ ಚರ್ಚಿಸಿದರು.
ದಡದಹಳ್ಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ನೀಡಲು ತಯಾರಿಸಲಾಗಿದ್ದ ಬಿಸಿಯೂಟದ ಗುಣಮಟ್ಟವನ್ನು ಪರಿಶೀಲಿಸಿ, ಮಕ್ಕಳ ಜೊತೆ ಬಿಸಿಯೂಟವನ್ನು ಸೇವನೆ ಮಾಡಿದರು. ನಂತರ ಅಂಗನವಾಡಿ, ಕೂಸಿನ ಮನೆಗೆ ಭೇಟಿ ನೀಡಿ ಮಕ್ಕಳಿಗೆ ವಿತರಿಸಲು ತಯಾರಿಸುತ್ತಿರುವ ಆಹಾರದ ಗುಣಮಟ್ಟವನ್ನು ವೀಕ್ಷಿಸಿದರು.
ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುμÁ್ಠನಗೊಳಿಸಲಾಗುತ್ತಿರುವ ಜಲ ಜೀವನ್ ಮಿಷನ್ ಯೋಜನೆಯ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಸ್ಥಳದಲ್ಲಿ ಹಾಜರಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಿರ್ದೇಶನ ನೀಡಿದರು.
ಮೀನುಗಾರಿಕೆ ಉಪನಿರ್ದೇಶಕರಾದ ಮಂಜೇಶ್, ಕಾರ್ಯನಿರ್ವಾಹಕ ಅಧಿಕಾರಿ ಗಿರಿಧರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಂಜಿತಾ, ಗ್ರಾಮ ಪಂಚಾಯತಿ ಅಧ್ಯ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಇತರರು ಇದ್ದರು.
Like this:
Like Loading...
Related