ಇಲಾಖಾ ಯೋಜನೆಗಳಲ್ಲಿ ಶೇ. 100ರಷ್ಟು ಪ್ರಗತಿಗೆ ಜಿ.ಪಂ. ಸಿಇಒ ಮೋನಾ ರೋತ್ ತಾಕೀತು

ಚಾಮರಾಜನಗರ: ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಬರುವ ಎಲ್ಲಾ ಇಲಾಖೆಗಳು ಶೇ. 100ರÀಷ್ಟು ಪ್ರಗತಿಯನ್ನು ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಲಿಂಕ್ ಡಾಕುಮೆಂಟ್ ಯೋಜನೆಯಡಿ ಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕಾರ್ಯಕ್ರಮಗಳಲ್ಲಿ ಸಾಧಿಸಿದ ಎಂಪಿಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವ ಕೆಲವು ಇಲಾಖೆಗಳು ಪ್ರಗತಿಯಲ್ಲಿ ಕಡಿಮೆ ಇವೆ. ಇಂತಹ ಇಲಾಖೆಗಳು ತ್ವರಿತವಾಗಿ ನಿಗದಿತ ಗುರಿ ಸಾಧಿಸಬೇಕು. ಅಕ್ಟೋಬರ್ ಮಾಹೆ ಮುಗಿದಿದೆ. ಆದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಮುಂಬರುವ ಸಭೆಯ ವೇಳೆಗೆ ಶೇ. 90ರಷ್ಟು ಪ್ರಗತಿ ಆಗಿರಬೇಕು ಎಂದು ಜಿ.ಪಂ ಸಿಇಒ ತಿಳಿಸಿದರು.

ಇಲಾಖಾ ಕಟ್ಟಡ ನಿರ್ವಹಣೆ ಮತ್ತು ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಅನುದಾನ ವ್ಯಪಗತವಾಗದಂತೆ ಅನುಷ್ಠಾನಾಧಿಕಾರಿಗಳು ನೋಡಿಕೊಳ್ಳಬೇಕು. ಹಾಗೂ ತಮ್ಮ ಇಲಾಖಾ ಯೋಜನೆಗಳಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದರು.   

ಇಲಾಖೆಯ ಕಾರ್ಯಕ್ರಮಗಳನ್ನು ತ್ವರಿತಗತಿಯಲ್ಲಿ ಜಾರಿಗೆ ತರಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಿ ಸರ್ಕಾರಕ್ಕೆ ವರದಿ ಮಾಡಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *