ಚಾಮರಾಜನಗರ: ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹಸಿ ಕಸ, ಒಣ ಕಸಗಳ ವಿಂಗಡಣೆ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುμÁ್ಠನ ಬೆಂಬಲ ಸಂಸ್ಥೆ ಕಡ್ರ್ಸ್ ರವರ ಸಂಯುಕ್ತಾಶ್ರಯದಲ್ಲಿ ಜೆ.ಜೆ.ಎಮ್ ಮತ್ತು ಎಸ್.ಬಿ.ಎಂ (ಗ್ರಾ) ಯೋಜನೆಯ ಐ.ಇ.ಸಿ ಹಾಗೂ ಹೆಚ್.ಆರ್.ಡಿ ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಾμï ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಘನ ಮತ್ತು ದ್ರವ ತ್ಯಾಜ್ಯಗಳ ನಿರ್ವಹಣೆ ಸರಿಯಾಗಿ ಆಗಬೇಕು. ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೂ ಗ್ರಾಮ ಪಂಚಾಯಿತಿಯಿಂದ ಕಸ ಸಂಗ್ರಹಣೆ ಬಳಕೆದಾರರ ಶುಲ್ಕವನ್ನು ಮುಂಬರುವ ಏಪ್ರಿಲ್ ತಿಂಗಳಿಂದ ಸಂಗ್ರಹಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದಮೂರ್ತಿ ಅವರು ಮಾತನಾಡಿ, ಜೆ.ಜೆ.ಎಂ ಕಾರ್ಯತ್ಮಕ ನಳ ಸಂಪರ್ಕದ ಮೂಲಕ ಗ್ರಾಮೀಣ ಭಾಗದ ಜನರಿಗೆ ಶುದ್ಧ ಮತ್ತು ಸುರಕ್ಷಿತವಾಗಿ ನೀರನ್ನು ಒದಗಿಸುತ್ತಿದ್ದೇವೆ ಎಂದರು.
ಚಾಮರಾಜನಗರ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಜೆ.ಜೆ.ಎಂ ಯೋಜನೆ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿದ್ದೇವೆ. ಅಗತ್ಯಕ್ಕೆ ಅನುಗುಣವಾಗಿ ನೀರು ಬಳಕೆ ಮಾಡಬೇಕು ಎಂದು ಹೇಳಿದರು.
ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಅವರು ಮಾತನಾಡಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಜೆ.ಜೆ.ಎಂ ಕಾಮಗಾರಿಯ ಡಿ.ಪಿ.ಆರ್ ಪ್ರತಿಗಳನ್ನು ನೀಡಲಾಗಿದ್ದು, ಗ್ರಾಮಗಳಲ್ಲಿ ಜೆ.ಜೆ.ಎಂ ಕಾಮಗಾರಿಯ ನಾಮಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ರತ್ನಶ್ರೀ ಪುರಸ್ಕøತರಾದ ಜೋಸೆಫ್ ಜಿ.ಎಂ ರೆಬೆಲ್ಲೋ ಅವರು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಬಗ್ಗೆ, ನೀರಿನ ಪೂರೈಕೆಯ ಜವಾಬ್ಧಾರಿಗಳು, ದ್ರವ ತ್ಯಜ್ಯಗಳ ನಿರ್ವಹಣೆ, ಕಾರ್ಯಚರಣೆ, ನೀರಿನ ಮಹತ್ವ, ಶುಚಿತ್ವದ ಬಗ್ಗೆ, ಮಳೆ ನೀರು ಕೊಯ್ಲು, ವೈಯುಕ್ತಿಕ ಇಂಗುಗುಂಡಿ ಬಗ್ಗೆ ತಿಳಿಸಿಕೊಟ್ಟರು.
ಇದೇ ವೇಳೆ ಗ್ರಾಮ ಪಂಚಾಯಿತಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಎಫ್.ಟಿ.ಕೆ ಕಿಟ್‍ಗಳನ್ನು ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಇತರೆ ಹಿರಿಯ ಅಧಿಕಾರಿಗಳು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.
Like this:
Like Loading...
Related