ಚಾಮರಾಜನಗರ: ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದು ಬಾಲ ನ್ಯಾಯ ಮಂಡಳಿ ಸದ್ಯಸ್ಯರಾದ ಟಿಜೆ ಸುರೇಶ್ ಕರೆ ನೀಡಿದರು.
ಕರಿನಂಜನಪುರದ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಯರ ನಿಲಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ವಿದ್ಯಾರ್ಥಿನಿಯರ ನಿಲಯ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಆಸರೆ ಟ್ರಸ್ಟ್..ಇವರ ಸಹಯೋಗದಲ್ಲಿ ಹೆಣ್ಣು ಮಕ್ಕಳ ಸಂರಕ್ಷಣೆ, ಬಾಲ ವಿವಾಹ ನಿಷೇಧ ಕುರಿತು ಆಯೋಜಿಸಲಾಗಿದ್ದ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜತೆಗೆ ಕಾನೂನುಗಳ ಬಗ್ಗೆ ಅರಿವು ಅಗತ್ಯ ಇದೆ. ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ ನಿಷೇಧ, ಪೆÇೀಸ್ಕೋ ಕಾಯ್ದೆಗಳ ಬಗ್ಗೆ ಜಾಗೃತಿ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ಪ್ರಸಂಗಗಳನ್ನು ನೋಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಗಂಡಾಗಲಿ, ಹೆಣ್ಣಾಗಲಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. 18 ವರ್ಷದ ನಂತರವೇ ಹೆಣ್ಣು ಮಕ್ಕಳಿಗೆ ಮದುವೆಯಾಗಬೇಕು. ಈ ಬಗ್ಗೆ ವಿದ್ಯಾರ್ಥಿನಿಯರು ಜಾಗೃತರಾಗಬೇಕಿದೆ ಎಂದರು.
ಹೆಣ್ಣು ಮಕ್ಕಳಿಗೆ ಸಮಾನ ಸ್ಥಾನಮಾನ ದೊರೆಯಲು ಉತ್ತಮ ಶಿಕ್ಷಣ ಕೊಡುವುದು ಅಗತ್ಯವಾಗಿದೆ. ಹೆಣ್ಣು ಮಕ್ಕಳು ಸಮಾಜದಲ್ಲಿ ಬಾಲ್ಯವಿವಾಹದ ಸಂಕೋಲೆಗೆ ಒಳಗಾಗಬಾರದು. ಇಂತಹ ಸಂದರ್ಭದಲ್ಲಿ ಪೆÇಲೀಸ್ ಮತ್ತು ಮಕ್ಕಳ ಸಹಾಯವಾಣಿ ಸಹಾಯ ಪಡೆದು ರಕ್ಷಣೆ ಮಾಡಿಕೊಳ್ಳಬಹುದಾಗಿದೆ ಎಂದರು.
ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಅಧ್ಯಕ್ಷ ಜಿ ಬಂಗಾರು ಬಹುಮಾನ ವಿತರಣೆ ಮಾಡಿ ಮಾತನಾಡಿ, ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಹೆಣ್ಣು ಮಕ್ಕಳು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಮೊದಲು ನಿಮ್ಮ ಪೆÇೀಷಕರು ನಂತರ ನಿಮ್ಮ ಶಿಕ್ಷಕಿಯರ ಜೊತೆ ಹಂಚಿಕೊಳ್ಳಿ ಎಂದು ತಿಳಿಸಿದರು.
ಹೆಣ್ಣು ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯಬೇಕು. ಮೊಬೈಲ್ ಹೆಚ್ಚು ಬಳಕೆ ಮಾಡಬಾರದು. ಬಹಳ ಜೋಪಾನವಾಗಿ ಇರಬೇಕು ಎಂದರು.
ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ, ಇನ್ನರ್ ವೀಲ್ ಸಂಸ್ಥೆ ಮಾಜಿ ಅಧ್ಯಕ್ಷೆ ಲಕ್ಷ್ಮಿ ಶಿವಕುಮಾರ್ ಚಾಲನೆ ನೀಡಿ ಮಾತನಾಡಿ, ಹೆಣ್ಣಿನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಭ್ರೂಣ ಹತ್ಯೆ, ಅನಕ್ಷರತೆ, ಕಿರುಕುಳ, ತಾರತಮ್ಯ, ಅವಮಾನ, ಅಗೌರವ, ಅತ್ಯಾಚಾರ ಮೊದಲಾದ ಅನ್ಯಾಯಗಳು ಹತೋಟಿಗೆ ಬರಬೇಕಾದರೆ, ಅವಳಿಗೆ ಬಾಲ್ಯದಿಂದಲೇ ತನ್ನ ಅಧಿಕಾರ, ಹಕ್ಕುಗಳ ಅರಿವಿರಬೇಕಾಗುತ್ತದೆ. ಈ ಅರಿವು ಮೂಡಿಸುವ ಜವಾಬ್ದಾರಿ ಪೆÇೀಷಕರದ್ದು ಎಂದರು.
ಬಾಲಕಿಯರ ವಿದ್ಯಾರ್ಥಿನಿಲಯದ ಪ್ರಭಾರ ಮೇಲ್ಚರಕಿ ಶಾಲಿನಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ಯರ ನಿಲಯ, ವಾರ್ಡನ್ ಶಿಲ್ಪ ಶ್ರೀ, ಪ್ರಥಮ ಸ್ಥಾನ ಪಡೆದ. ಜೆಎಸ್‍ಎಸ್ ಮಹಿಳಾ ಕಾಲೇಜಿನ ಯಶೋಧ, ದ್ವಿತೀಯ ಸ್ಥಾನ ಪಡೆದ ಇಂಜಿನಿಯರ್ ಕಾಲೇಜ್ ಪಲ್ಲವಿ, ದ್ವಿತೀಯ ಸ್ಥಾನ ಪಡೆದ ಭರಣಿ ಕಾಲೇಜಿನ ಮೇಘ, ನಾಲ್ಕನೇ ಸ್ಥಾನ ಪಡೆದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ವಿದ್ಯಾರ್ಥಿನಿ ಕವಿತಾ ರವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕೀರ್ತನ, ಬಿಂದು, ಸಿಂಚನ, ಶ್ವೇತ, ಸ್ಪಂದನ, ಆಶಾ ರಾಣಿ, ಮಾನಸ, ನಂಜ ಮಣಿ ಸೇರಿದಂತೆ ಹಲವು ವಿದ್ಯಾರ್ಥಿನಿಯರು ಮಹಿಳೆಯರ ಸಂರಕ್ಷಣೆ , ಬಾಲ ವಿವಾಹ ನಿಷೇಧ ಕುರಿತು ಮಾತನಾಡಿ ಪ್ರತಿಜ್ಞೆ ಸ್ವೀಕರಿಸಿದರು. ವಿದ್ಯಾರ್ಥಿನಿಯರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.