ಕಾಂಗ್ರೆಸ್ ಸಂಘಟನೆಗೆ ಹೆಚ್ಚಿನ ಇನ್ನು ಹೆಚ್ಚಿನ ಒತ್ತು ನೀಡಿ : ಎಸ್.ಸಿ. ಬಸವರಾಜು

ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರ ಸಭೆ

ಚಾಮರಾಜನಗರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಪಕ್ಷದ ಉಸ್ತುವಾರಿ ಎಚ್.ಸಿ. ಬಸವರಾಜು ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಸಂಘಟನೆ ಹಾಗು ಕಾರ್ಯಕ್ರಮಗಳ ಕುರಿತು ಪರಿಶೀಲನೆ ಬಳಿಕ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಜನ ಮುನ್ನಣೆಯನ್ನು ಗಳಿಸಿದೆ. ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ಹೆಚ್ಚಿನ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡುತ್ತಿದ್ದಾರೆ ಎಂದರು.

ಚಾಮರಾಜನಗರ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ಬಲಿಷ್ಟವಾಗಿ ಸಂಘಟನೆ ಮಾಡುವ ಜವಾಬ್ದಾರಿ ನಮ್ಮದಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಮುಂಬರುವ ಸ್ಥಳಿಯ ಸಂಸ್ಥೆಗಳು ಚುನಾವಣೆ, ಜಿ.ಪಂ.ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರ್ಯಕರ್ತರು ಹಾಗೂ ಪ್ರಮುಖ ಪದಾಧಿಕಾರಿಗಳ ಶ್ರಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಿಇ ಸಂಘಟನೆ ಒತ್ತು ನಿಡಬೇಕು ಎಂದರು.

ಮತ್ತೋರ್ವ ಉಸ್ತುವಾರಿಯಾದ ಕೆಪಿಸಿಸಿ ಕಾರ್ಯದರ್ಶಿ ಮಿಲ್ಲನ್ ಧರ್ಮಸೇನಾ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀಡಿ, ಸಂವಿಧಾನ ವಿರೋಧಿ ಧೋರಣೆ ವಿರುದ್ದ ಜನಜಾಗೃತಿ ಮೂಡಿಸಬೇಕಾಗಿದೆ. ಚಾಮರಾಜನಗರ ಜಿಲ್ಲೆ ಎಂದರೆ ಕಾಂಗ್ರೆಸ್ ಎಂಬಂತೆ ಬಿಂಬಿತವಾಗಿದೆ. ದಿ.ಆರ್. ದ್ರುವನಾರಾಯಣ್ ಅವರು ಆ ಮಾದರಿಯಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಹೋಗಿದ್ದಾರೆ. ನಮ್ಮ ಪಕ್ಷದ ಅಧಿಕಾರದಲ್ಲಿದೆ ಎಂಬ ನಿರೀಕ್ಷೆ ಕಾರ್ಯಕರ್ತರು, ಪದಾಧಿಕಾರಿಗಳಲ್ಲಿರುತ್ತದೆ. ಇದನ್ನು ವರಿಷ್ಟರ ಗಮನಕ್ಕು ತಂದಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಅವಕಾಶಗಳು ಲಭ್ಯವಾಗಲಿದೆ ಎಂದು ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ. ಪಕ್ಷದ ಎಂಟು ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಪಕ್ಷದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕಾರ್ಯಕರ್ತರಲ್ಲಿ ಹುರುಪು ತುಂಬಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕಾಗಿದೆ. ಈಗಾಗಲೇ ರಾಜ್ಯ ಉಸ್ತುವಾರಿ ಸುರ್ಜುವಾಲೆ ಅವರು ಎಲ್ಲಾ ಹಂತದ ಪದಾಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಧ್ಯಕ್ಷರನ್ನು ಅಹ್ವಾನಿಸುವವರಿದ್ದಾರೆ. ಹೀಗಾಗಿ ತಮ್ಮ ಸಂಘಟನೆ ಮತ್ತು ಕಾರ್ಯಕ್ರಮಗಳ ಕುರಿತು ಪಟ್ಟಿಯನ್ನು ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಹೊಂಗನೂರು ಚಂದ್ರು, ತೋಟೇಶ್, ಮುನಿರಾಜು, ರಾಜಶೇಖರ್, ಈಶ್ವರ್, ಎಸ್ಸಿ ಘಟಕದ ಅಧ್ಯಕ್ಷ ಸೋಮೇಶ್ವರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಶ್, ಕೆಪಿಸಿಸಿ ಸದಸ್ಯ ಸೈಯದ್ ರಫಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಬ್ಜಲ್ ಷರೀಫ್, ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ಎನ್‍ಎಸ್‍ಯುನ ಅಧ್ಯಕ್ಷ ನಗುಮೋಹನ್, ರವಿಗೌಡ ಮೊದಲಾಧವರು ಇದ್ದರು.

Leave a Reply

Your email address will not be published. Required fields are marked *