ಚಾಮರಾಜನಗರ: ಹೆಣ್ಣು ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಕಲಿತು ಮುಖ್ಯ ವಾಹಿನಿಗೆ ಬರಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಎಂಎಸ್‍ಸಿ ಭೌತಶಾಸ್ತ್ರ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಾಳವಿಕಾ ತಿಳಿಸಿದರು.
ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯ ಬಿಎಡ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಮೊದಲು ಸಮಯ ಪ್ರಜ್ಞೆ ಬೆಳೆಸಿಕೊಳ್ಳುವ ಜತೆಗೆ ಪೆÇೀಷಕರು ಹಾಗೂ ಗುರು ಹಿರಿಯರಿಗೆ ಗೌರವ ಸಲ್ಲಿಸುವ ಪ್ರವೃತ್ತಿ ಬಳಸಿಕೊಳ್ಳಬೇಕು ಆಗ ಉತ್ತಮ ವಿದ್ಯಾರ್ಥಿನಿಯಾಗಿ ಹೆಸರು ಪಡೆಯಬಹುದು ಎಂದು ಹೇಳಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾರ್ಚ್ 8ರಂದು ಇಡೀ ವಿಶ್ವದೆಲ್ಲೆಡೆ ಆಚರಣೆ ಮಾಡುತ್ತಾರೆ. ಮೊದಲು ನಮ್ಮ ತಾಯಿಯನ್ನು ಪೂಜಿಸಿ ಆಶೀರ್ವಾದ ಪಡೆದುಕೊಂಡರೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ಜೆಎಸ್‍ಎಸ್ ಬಿಎಡ್ ಕಾಲೇಜ್ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿ ಇಲ್ಲಿ ವ್ಯಾಸಂಗ ಮಾಡುತ್ತಿರುವುದು ನನಗೆ ತುಂಬಾ ಸಂತಸದ ವಿಷಯ. ಇನ್ನು ಬೇಕು ಹೆಚ್ಚೆಚ್ಚು ಸಾಧನೆ ಮಾಡಬೇಕು ಎಂಬ ಛಲ ನನ್ನಲ್ಲಿದೆ. ಇದಕ್ಕೆ ಪೆÇೀಷಕರು. ಹಿತೈಷಿಗಳು ಉಪನ್ಯಾಸಕರು ಸಹಕಾರ ಅತ್ಯಗತ್ಯ ಇಂದು ಅಭಿಪ್ರಾಯಪಟ್ಟರು.
ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರೇ ಹೆಚ್ಚು ಸಾಧನೆ ಮಾಡುತಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಆಗ ವಿದ್ಯಾರ್ಥಿ ಜೀವನ ಯಶಸ್ವಿಯಾಗುತ್ತದೆ. ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್ ಮಧುಶ್ರೀ. ಪ್ರಾಂಶುಪಾಲ ಕೆಸಿ ಬಸವಣ್ಣ ಮತ್ತಿತರರು ಹಾಜರಿದ್ದರು.