ಚಾಮರಾಜನಗರ: ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಚಾಮರಾಜನಗರದಲ್ಲಿಂದು ಕೇಂದ್ರ ಸರ್ಕಾರದ 12 ವರ್ಷಗಳ ಕಾರ್ಯ ಸಾಧನೆಗಳು ಹಾಗೂ ನಶಾಮುಕ್ತ ಭಾರತ ಅಭಿಯಾನದ ಕುರಿತ ಆಯೋಜಿಸಲಾಗಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಮೈಸೂರು ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿ. ಮರಿಸ್ವಾಮಿ ಅವರು ಮಾಧ್ಯಮದ ಪಾತ್ರ ಕೇವಲ ಸಮಾಜ ಹಾಗೂ ಆಡಳಿತದಲ್ಲಿರುವ ಲೋಪದೋಷಗಳನ್ನು ಸರಿಪಡಿಸುವುದು ಮಾತ್ರವಲ್ಲ, ಬದಲಾಗಿ ಜನರನ್ನು ಜಾಗೃತಗೊಳಿಸುವಲ್ಲಿಯೂ ಮಾಧ್ಯಮದ ಪಾತ್ರ ಮಹತ್ತರವಾಗಿದೆ. ಮಾಧ್ಯಮದವರು ಸತ್ಯಾಸತ್ಯತೆಗೆ ಆದ್ಯತೆ ನೀಡಿ, ವಸ್ತುನಿಷ್ಠ ವರದಿಗಳನ್ನು ಪ್ರಚುರಪಡಿಸಬೇಕು ಎಂದು ಹೇಳಿದರು.
ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಎಸ್.ಜಿ. ರವೀಂದ್ರ ಅವರು ವಾರ್ತಾಲಾಪ ಕಾರ್ಯಾಗಾರದ ಆಶಯ ನುಡಿಗಳನ್ನಾಡಿ ಕೇಂದ್ರ ಸರ್ಕಾರದ ಯೋಜನೆಗಳು ಜಿಲ್ಲೆಯಲ್ಲಿ ಅನುμÁ್ಠನಗೊಳ್ಳುತ್ತಿರುವ ಪ್ರಗತಿಯ ಕುರಿತು ಮಾಹಿತಿ ನೀಡುವ ಕಾರ್ಯಾಗಾರವೇ ವಾರ್ತಾಲಾಪ. ಪ್ರಸ್ತುತ ಕೇಂದ್ರ ಸರ್ಕಾರವು 12 ವರ್ಷಗಳ ಸಾಧನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 2047ರ ವಿಕಸಿತ ಭಾರತ ಧ್ಯೇಯವನ್ನು ಸಾಧಿಸಲು ಕೃಷಿಕರು, ಹಿಂದುಳಿದ ವರ್ಗ, ಮಹಿಳೆ ಹಾಗೂ ಯುವಜನರನ್ನು ಕೇಂದ್ರಿಕೃತವಾಗಿಸಿ, ಅನೇಕ ಯೋಜನೆಗಳನ್ನು ರೂಪಿಸಿ, ಜಾರಿಗೆ ತಂದಿದೆ. ಪ್ರಸ್ತುತ ದೇಶಾದ್ಯಂತ ನಶಾಮುಕ್ತ ಭಾರತ ವಿಶೇಷ ಅಭಿಯಾನವೂ ಸಹ ನಡೆಯುತ್ತಿದೆ. ಜಿಲ್ಲೆಯ ಯೋಜನೆಗಳ ಅನುμÁ್ಠನದ ಬಗ್ಗೆ ಮತ್ತಷ್ಟು ಪ್ರಚಾರ ಮಾಡಬೇಕು ಎಂದರು
ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಮಾತನಾಡಿ ಮಾಧ್ಯಮ ಮಿತ್ರರಿಗೆ ಇಲಾಖೆಗಳ ಕುರಿತು ಪೂರಕ ಮಾಹಿತಿ ಇರುತ್ತದೆ. ಇವುಗಳ ಸತ್ಯಾಸತ್ಯತೆಯನ್ನು ಅರಿತು ವರದಿ ಮಾಡಿದಾಗ ತಳಮಟ್ಟದ ಜನರಿಗೆ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ಸಮಾಜ ಹಾಗೂ ಅಧಿಕಾರ ವರ್ಗವನ್ನು ಎಚ್ಚರಿಸುವ ಮಹತ್ವದ ಜವಾಬ್ದಾರಿ ಮಾಧ್ಯಮದ್ದಾಗಿದೆ. ವಸ್ತುನಿಷ್ಠ ವರದಿಗಳ ಮೂಲಕ ಜನರ ಧ್ವನಿಯಾಗಿ ಮಾಧ್ಯಮ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಚಾಮರಾಜನಗರದಲ್ಲಿ ವಾರ್ತಾಲಾಪ ಕಾರ್ಯಾಗಾರ ಆಯೋಜಿಸಿದ್ದು ಬಹಳ ಸೂಕ್ತವಾಗಿದೆ. ವೇಗವಾಗಿ ಮಾಹಿತಿಗಳು ಹರಿದಾಡುತ್ತಿರುವ ಇಂದಿನ ಯುಗದಲ್ಲಿ ಮಾಧ್ಯಮದವರು ಸತ್ಯವನ್ನು ಪರಾಮರ್ಶಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ತನ್ನ ಧ್ವನಿಯನ್ನು ತಲುಪಿಸುವಂತೆ ಮಾಡಬೇಕು. ಜಿಲ್ಲೆಯಲ್ಲಿ ಉತ್ತಮ ಆಡಳಿತ ನಡೆಸುವಲ್ಲಿ ಮಾಧ್ಯಮದ ಸಹಕಾರವೂ ಅತ್ಯಂತ ಅವಶ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ, ವಾರ್ತಾಲಾಪ ಕಾರ್ಯಾಗಾರ ಸರ್ಕಾರದ ಯೋಜನೆಗಳನ್ನು ತಿಳಿದುಕೊಳ್ಳಲು ಇರುವ ಉತ್ತಮ ಕಾರ್ಯಕ್ರಮ. ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಈ ಸಂವಾದ ಕಾರ್ಯಕ್ರಮ ಸಕಾರಾತ್ಮಕ ವರದಿಗಳನ್ನು ಮಾಡುವಲ್ಲಿ ಹೆಚ್ಚು ಪೂರಕವಾಗಿದೆ ಎಂದರು.
ಉದ್ಘಾಟನೆ ಕಾರ್ಯಕ್ರಮದ ನಂತರ ವಾರ್ತಾಲಾಪದ ಗೋಷ್ಠಿಯಲ್ಲಿ ನಶಾಮುಕ್ತ ಭಾರತ ಅಭಿಯಾನದ ಕುರಿತು ಹೆಚ್ಚುವರಿ ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿ ಎಂ.ಎನ್. ಶಶಿಧರ್ ಅವರು ಮಾತನಾಡಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ‘ರೈಸ್’ (ಖISಇ) ಎಂಬ ಯೋಜನೆ ರೂಪಿಸಲಾಗಿದೆ. ರೆಫ್ಯೂಸ್-ಇನ್ಫಾರ್ಮ್-ಸಪೆÇೀರ್ಟ್ ಎಂಪವರಮೆಂಟ್ ಎಂಬುದು ಇದರ ಅರ್ಥ. ಮಾದಕ ವಸ್ತುಗಳನ್ನು ತ್ಯಜಿಸುವುದು, ಅದರ ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡುವುದು, ಅಭಿಯಾನಕ್ಕೆ ಬೆಂಬಲ ನೀಡುವುದು ಹಾಗೂ ವ್ಯಸನಿಗಳನ್ನು ಮುಖ್ಯವಾಹಿನಿಗೆ ತರಲು ಅವರನ್ನು ಸಬಲೀಕರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.
ಉಚಿತ ಸಹಾಯವಾಣಿ ಸಂಖ್ಯೆ 1908 ಯನ್ನು ಇದಕ್ಕಾಗಿ ಮೀಸಲಿಡಲಾಗಿದೆ. 18 ರಿಂದ 35 ವರ್ಷಗಳ ಯುವಜನರನ್ನು ವ್ಯಸನಗಳಿಂದ ದೂರವಿರಿಸಲು ಹಾಗೂ ವ್ಯಸನಕ್ಕೆ ತುತ್ತಾದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ‘ಸನ್ಮಿತ್ರ’ ಎಂಬ ಆಪ್ತಸಮಾಲೋಚನೆ ಕಾರ್ಯವನ್ನು ಸಹ ನಡೆಸಲಾಗುತ್ತಿದೆ ಎಂದು ಹೇಳಿದ ಹೆಚ್ಚುವರಿ ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿಗಳು ಮಾದಕ ವಸ್ತುಗಳ ಮಾರಾಟ, ಬಳಕೆ ಮಾಡುವವರ ವಿರುದ್ಧ ಇರುವ ಕಠಿಣ ಕ್ರಮ ಹಾಗೂ ಶಿಕ್ಷೆಗಳ ಕುರಿತು ಅವರು ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.
ಬುಡಕಟ್ಟು ಸಮುದಾಯಗಳ ಸಬಲೀಕರಣದ ಕುರಿತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಿಂಧ್ಯಾ ಹೆಚ್.ಎಸ್. ಅವರು ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಗಳಿಗಾಗಿ ಅನುμÁ್ಠನಗೊಂಡಿರುವ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಶಿಕ್ಷಣ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಬುಡಕಟ್ಟು ಸಮುದಾಯಗಳ ಸಮಗ್ರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಮಹಿಳೆ ಮತ್ತು ಮಕ್ಕಳ ಸಶಕ್ತೀಕರಣದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಮಂಜುಳಾ ಬಿ. ಸಮೃದ್ಧ ರಾಷ್ಟ್ರಕ್ಕಾಗಿ ರೈತ ಕಾರ್ಯಕ್ರಮಗಳ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಬಾನುಪ್ರಕಾಶ್ ಯು.ಹೆಚ್., ಆರ್ಥಿಕ ಸೇರ್ಪಡೆಯ ಕುರಿತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕರಾದ ಸುರೇಖಾ ಎಂ. ಅವರು ಮಾಹಿತಿ ಹಂಚಿಕೊಂಡರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎ. ರಮೇಶ್ ಅವರು ಉಪಸ್ಥಿತರಿದ್ದರು. ಪಿಐಬಿಯ ಸಹಾಯಕ ನಿರ್ದೇಶಕರಾದ ಎಂ. ಮಧು ಸ್ವಾಗತಿಸಿದರು. ಪುರುμÉೂೀತ್ತಮ್ ಮತ್ತು ನಿತೀಶ ಅವರು ಕಾರ್ಯಕ್ರಮ ನಿರೂಪಿಸಿದರು.