ಅಕ್ಟೋಬರ್ 17, 18, 19 ರಂದು ಅದ್ದೂರಿ ಚಾ.ನಗರ ದಸರಾ: ಸಕಲ ಸಿದ್ದತೆಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ, ಅಕ್ಟೋಬರ್ 09 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯಲ್ಲಿ ಅಕ್ಟೋಬರ್ 17, 18 ಹಾಗೂ 19ರಂದು ಮೂರು ದಿನಗಳ ಕಾಲ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಈ ಸಂಬಂಧ ಸಕಲ ಸಿದ್ದತೆಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.

   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಜಿಲ್ಲಾ ದಸರಾ ಉತ್ಸವ-2026ರ ಆಚರಣೆ ಕಾರ್ಯಕ್ರಮ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

   ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಭಾಗವಾಗಿ ಜಿಲ್ಲಾಕೇಂದ್ರವಾದ ಚಾಮರಾಜನಗರ ಪಟ್ಟಣದಲ್ಲಿ ದಸರಾ ಮಹೋತ್ಸವ ಆಯೋಜಿಸಲಾಗಿದೆ. ಹಿಂದೆ ಕೆಲಬಾರಿ ಬರ ಇದ್ದಾಗ ಜಿಲ್ಲೆಯಲ್ಲಿ ದಸರಾ ಆಚರಣೆ ಮಾಡಿರಲಿಲ್ಲ. ಪ್ರಸ್ತುರ ಬರ ಇದ್ದರೂ ಮಳೆಯಾಗಿ ಜನಜೀವನ ಸುಧಾರಣೆಯಾಗುತ್ತಿದೆ. ಚಾಮರಾಜನಗರ ತೀವ್ರ ಬರಪೀಡಿತ ಜಿಲ್ಲೆಯಾಗಿ ಘೋಷಣೆಯಾಗಿದ್ದರೂ ದಸರಾ ಉತ್ಸವಕ್ಕೆ ಅವಕಾಶ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇಲ್ಲಿನ ಜನರ ಅಭಿಲಾμÉ ಈಡೇರಿದೆ ಎಂದು ಸಚಿವರು ತಿಳಿಸಿದರು. 

   ಮೂರು ದಿನಗಳ ಕಾಲ ನಡೆಯುವ ಚಾಮರಾಜನಗರ ದಸರಾ ಉತ್ಸವದ ಅಂಗವಾಗಿ ರೈತ ದಸರಾ, ಮಹಿಳಾ ದಸರಾ, ಯುವಸಂಭ್ರಮ, ಮ್ಯಾರಥಾನ್, ಪಾರಂಪರಿಕ ನಡಿಗೆ, ದಸರಾ ಓಟ, ದಸರಾ ಕವಿಗೋಷ್ಠಿ ಇರಲಿದೆ. ಮುಖ್ಯವೇದಿಕೆಯಲ್ಲಿ ರಸಮಂಜರಿ, ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮ, ಆಹಾರ ಮೇಳ, ಪುಸ್ತಕ ಮೇಳ, ವಸ್ತುಪ್ರದರ್ಶನ ಹಾಗೂ ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಲಿ ಟೂರಿಸಂ ಅಭಿವೃದ್ದಿಗಾಗಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಶೋ ಏರ್ಪಡಿಸುವುದು ಈ ಬಾರಿಯ ವಿಶೇಷವಾಗಿದೆ ಎಂದು ಸಭೆಯಲ್ಲಿ ವಿವರಿಸಿದರು. 

   ದಸರಾ ಕಾರ್ಯಕ್ರಮವನ್ನು ಅತ್ಯಂತ ಶಿಸ್ತು ಹಾಗೂ ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಮೆರವಣಿಗೆ ಸಮಿತಿ, ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ, ಸ್ವಚ್ಚತಾ ಸಮಿತಿ, ಸಾಂಸ್ಕೃತಿಕ ಸಮಿತಿ, ಆಹಾರ ಹಾಗೂ ವಸತಿ ಸಮಿತಿ, ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ದಸರಾ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ದಸರಾವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಆಯೋಜಿಸಬೇಕಾದ ಅನಿವಾರ್ಯತೆ ಇರುವುದರಿಂದ ವಿವಿಧ ಸಮಿತಿಯಲ್ಲಿರುವ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಪೂರ್ಣ ಸಿದ್ದತೆಗಾಗಿ ಇಂದಿನಿಂದಲೇ ಕಾರ್ಯೋನ್ಮುಖರಾಗುವಂತೆ ಸಚಿವರು ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.

  ವಿದ್ಯುತ್ ದೀಪಾಲಂಕಾರ ನಗರದ ಎಲ್ಲಾ ಕಡೆಯೂ ಇರಬೇಕು. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರ ಹೆಚ್ಚು ಜನರನ್ನು ಸೆಳೆಯುವಂತಿರಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ನೀಡಬೇಕು. ಅಲ್ಲದೆ ನಗರದ ಪ್ರವೇಶದ್ವಾರಗಳಲ್ಲಿ ‘ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸುಸ್ವಾಗತ’ ಮಾದರಿಯ ಸ್ವಾಗತ ಕಮಾನು ನಿರ್ಮಿಸಬೇಕು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಜನರನ್ನು ಆಕರ್ಷಿಸುವಂತಿರಬೇಕು. ಜಿಲ್ಲೆಯ ಯಾವುದೇ ಭಾಗದ ಕಲಾವಿದರು ಸಾಂಸ್ಕøತಿಕ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಕಲಾವಿದರಿಗೂ ಸಮಾನ ಅವಕಾಶಗಳು ಸಿಗಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಕಲಾವಿದರ ನೊಂದಣಿಗಾಗಿ ಅರ್ಜಿಗಳನ್ನು ಕರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.       
         
   ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಖ್ಯವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವರನಟ ಡಾ. ರಾಜ್‍ಕುಮಾರ್ ರಂಗಮಂದಿರ, ಡಾ. ಬಿ.ಆರ್. ಅಂಬೇಡ್ಕರ್ ಭವನ, ಮಹರ್ಷಿ ವಾಲ್ಮೀಕಿ ಭವನಗಳಲ್ಲಿಯೂ ಕಾರ್ಯಕ್ರಮಗಳು ನಡೆಯಲಿವೆ. ಯುವಸಂಭ್ರಮ ಕಾರ್ಯಕ್ರಮದಲ್ಲಿ ವೈದ್ಯಕೀಯ, ಕಾನೂನು, ಎಂಜಿನಿಯಂರಿಂಗ್ ಸೇರಿದಂತೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲು ತಿಳಿಸಬೇಕು. ವೇದಿಕೆ ನಿರ್ಮಾಣ ಆಕರ್ಷಕವಾಗಿರಲಿ. ಚಾಮರಾಜೇಶ್ವರ ದೇವಸ್ಥಾನ, ಜನನಮಂಟಪ, ಕಾರ್ಯಕ್ರಮ ನಡೆಯುವ ಸ್ಥಳಗಳು ಸ್ವಚ್ಚತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು, ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿರಬೇಕು. ಕಾರ್ಯಕ್ರಮ ನೀಡುವ ಕಲಾವಿದರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.  

  ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಜಿಲ್ಲಾ ಕೇಂದ್ರ ಸಂಪರ್ಕಿಸುವ ಪ್ರಮುಖ ದ್ವಾರಗಳಲ್ಲಿ ವಿಶೇಷವಾಗಿ ದೀಪಾಲಂಕಾರ ಮಾಡಬೇಕು. ಈ ಮೂಲಕ ಎಲ್ಲೆಡೆ ಹಬ್ಬದ ವಾತಾವರಣ ಇರಬೇಕು ಎಂದರು. 

  ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ದಸರಾ ಕಾರ್ಯಕ್ರಮಗಳ ಸುಗಮ ನಿರ್ವಹಣೆ, ಉಸ್ತುವಾರಿಗಾಗಿ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲು ರೂಪುರೇμÉ ತಯಾರಿಸಿದ್ದು ಸಮಿತಿಗಳು ಕಾರ್ಯೋನ್ಮುಖವಾಗಲಿವೆ. ಈ ಬಾರಿಯ ದಸರಾವನ್ನು ಯಶಸ್ವಿ ಹಾಗೂ ಜನಾಕರ್ಷಕಗೊಳಿಸಲು ಎಲ್ಲಾ ಅವಶ್ಯ ಸಿದ್ದತೆಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ತಿಳಿಸಿದರು. 

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೆÇಲೀಸ್ ವರಿμÁ್ಟಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಉಪವಿಭಾಗಾಧಿಕಾರಿ ದಿನೇಶ್‍ಕುಮಾರ್ ಮೀನಾ, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಡಿ.ವೈ.ಎಸ್.ಪಿ ಸ್ನೇಹರಾಜ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *