ಚಾಮರಾಜನಗರ: ನಗರಕ್ಕೆ ಆಗಮಿಸಿದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ ಅದ್ದೂರಿ ಸ್ವಾಗತ ಕೋರಿ ಬರ ಮಾಡಿಕೊಳ್ಳಲಾಯಿತು.
ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ರಾದ ಮಂಜೇಶ್, ಶಿವರಾಜೇಗೌಡ, ಜಗದೀಶ್ ಗೌಡ, ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಕಾರ್ಯದರ್ಶಿ ಲೋಕೇಶ್, ಬೆಂಗಳೂರು ನಗರ ಮಹಾ ಪ್ರಧಾನ ಕಾರ್ಯದರ್ಶಿ ಜಯಂತ್ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಆಟೋ ಸಂಘದ ಅಧ್ಯಕ್ಷ ಮಹೇಶ್, ಸಂಘಟನೆ ಜಿಲ್ಲಾ ಗೌರವಾಧ್ಯಕ್ಷ ಕೃಷ್ಣನಾಯಕ, ಸಂಘಟನಾ ಕಾರ್ಯದರ್ಶಿ ಸಿಂಗನಪುರ ಮಹೇಶ್, ಉಪಾಧ್ಯಕ್ಷ ವೆಂಕಟೇಶ್, ಬಸವರಾಜು ಮದಕರಿ, ನಾರಾಯಣ್, ಮಂಗಲ ಹೊಸೂರು ಶಿವಣ್ಣ ಇತರರು ಹಾಜರಿದ್ದರು.
