ಯರಕನಗದ್ದೆಪೋಡಿನಲ್ಲಿ ಗೊರುಕನ ನೃತ್ಯದ ಮೂಲಕ  ಸಚಿವ ಟಿ. ರಘುಮೂರ್ತಿಗೆ ಅದ್ದೂರಿ ಸ್ವಾಗತ

  • ಗಿರಿಜನರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆ ಆಲಿಸಿದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವರು

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಯರಕನಗದ್ದೆಪೋಡಿಗೆ ಭೇಟಿ ನೀಡಿದ  ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಅವರಿಗೆ ಗಿರಿಜನರು ಗೊರುಕನ ನೃತ್ಯ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು.

ಸಚಿವರು ಪೋಡಿನ  ನಿವಾಸಿಗಳೊಂದಿಗೆ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೀಶ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್
ವಿ.ಚಂದ್ರು,ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ಬಸವರಾಜು, ಜಿ.ಪಂ.ಮಾಜಿ ಅಧ್ಯಕ್ಷೆ ಕೇತಮ್ಮ,ಮಾಜಿ ಸದಸ್ಯರಾದ ಎಸ್.ಸೋಮನಾಯಕ, ರಮೇಶ್, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿಂದ್ಯಾ, ತಹಸೀಲ್ದಾರ್ ನಯನ,  ಅಶೋಕ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *