ಮಹಾನ್ ದೇಶಪ್ರೇಮಿ ಡಾ.ಬಿ.ಆರ್.ಅಂಬೇಡ್ಕರ್ : ಎನ್.ಮಹೇಶ್

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿಬ್ಬಾಣ್ ದಿವಸ್ ಆಚರಣೆ
ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ದೇಶಪ್ರೇಮಿಯಾಗಿದ್ದರು. ಅವರ ಕೊನೆಯ ಭಾಷಣವನ್ನು ಭಾರತೀಯರೆಲ್ಲರೂ ಓದಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿಬ್ಬಾಣ್ ದಿವಸ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್  ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ‌ ಮಾತನಾಡಿದರು. ಅಂಬೇಡ್ಕರ್ ರವರ ಕೊನೆಯ ಭಾಷಣ ಓದಿದಾಗ ಮಾತ್ರ ಅವರು ಅರ್ಥವಾಗುತ್ತಾರೆ.  ದೇಶಕ್ಕಾಗಿ, ದೇಶದ ಐಕ್ಯತೆಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದರು.
ಅಂಬೇಡ್ಕರ್ ಅವರು ಬಾಲ್ಯದಲ್ಲಿಯೇ ತುಂಬಾ ಕಷ್ಟಪಟ್ಟು ದೇಶ, ವಿದೇಶದಲ್ಲಿ ವ್ಯಾಸಂಗ ಮಾಡಿ ಬಹಳ ವಿದ್ವತ್ ಗಳಿಸಿ ವಿಶ್ವ ಜ್ಞಾನಿಯಾದರು.
ಅವರ ತತ್ವ ಆದರ್ಶ ಗಳನ್ನು  ಎಲ್ಲರೂ ಪಾಲಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ ಮಾತನಾಡಿ,  ಎಲ್ಲ ಕಾಲಕ್ಕೂ ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ ವಾಗಿರುತ್ತದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಅವರ ಬರೆದಿರುವ ಸಂವಿಧಾನದ ಓದಬೇಕು ಎಂದು ಸಲಹೆ ನೀಡಿದರು.
ನಿವೃತ ಪಿಯುಡಿಡಿ ಮಂಜುನಾಥ್ ಪ್ರಸನ್ನ ಮಾತನಾಡಿ, ಅಂಬೇಡ್ಕರ್ ಅವರು ಅಪಾರ ಅಧ್ಯಯನ ಮಾಡಿ ಅಪಾರ ಜ್ಞಾನ ಹೊಂದಿದ್ದರು.  ತಮ್ಮ ಬದುಕನ್ನು ದೇಶಕ್ಕಾಗಿ, ಶೋಷಿತರಿಗಾಗಿ ಮುಡಿಪಾಗಿಟ್ಟಿದ್ದರು ಎಂದರು
ಚೂಡ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಮಾತನಾಡಿ, ಬಿಜೆಪಿಯಿಂದ ಅಂಬೇಡ್ಕರ್ ಅವರಿಗೆ ಗೌರವ ಸಿಗುತ್ತಿದೆ ಹೊರತು ಕಾಂಗ್ರೆಸ್ ನಿಂದಲ್ಲ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್,ಹೊನ್ನೂರು ಮಹದೇವಸ್ವಾಮಿ, ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ  ಚಂದ್ರಶೇಖರ್, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ರೈತಮೋರ್ಚಾದ ಜಿಲ್ಲಾಧ್ಯಕ್ಷ ಸುಂದ್ರಪ್ಪ, ಜಿ.ಪಂ ಮಾಜಿ ಸದಸ್ಯ ಬಾಲರಾಜು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯ,  ನಗರಸಭಾ ಮಾಜಿ ಸದಸ್ಯರಾದ ಶಿವಣ್ಣ, ಕುಮುದ ಕೇಶವಮೂರ್ತಿ,
ನಗರಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್,  ಪಿ.ರಂಗಸ್ವಾಮಿ, ಮಂಜುನಾಥ್, ವೇಣುಗೋಪಾಲ ಇತರರು ಹಾಜರಿದ್ದರು-

Leave a Reply

Your email address will not be published. Required fields are marked *