ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಗುಂಡ್ಲುಪೇಟೆ ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಗುರುವಾರ (ಜೂ.4) ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಅಡುಗೆ ಮನೆಗೆ ತೆರಳಿ ಅಲ್ಲಿನ ಆಹಾರ ಧಾನ್ಯ, ಸಿದ್ದಪಡಿಸಲಾಗಿದ್ದ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

ಶೈಕ್ಷಣಿಕ ಸೌಲಭ್ಯಗಳು, ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಹಾಗೂ ವಸತಿ ವಾತಾವರಣ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದ್ದು, ವಿದ್ಯಾರ್ಥಿನಿಲಯಗಳ ಗುಣಮಟ್ಟದ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್. ವಿಶ್ವನಾಥ್ ಭೇಟಿಯ ವೇಳೆ ಇದ್ದರು.

Leave a Reply

Your email address will not be published. Required fields are marked *