ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ .ಡಿ .ಕುಮಾರಸ್ವಾಮಿ ಅವರು 66 ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಮುಖಂಡ ಆಲೂರುಮಲ್ಲು ಅವರ ನೇತೃತ್ವದಲ್ಲಿ ನಗರದ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರ ಆಲೂರುಮಲ್ಲು ಮಾತನಾಡಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು 66 ನೇ ಹುಟ್ಟುಹಬ್ಬದ ಅಂಗವಾಗಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭಗವಂತ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಚಿನ್ನಭೋವಿ, ಡಾ.ಯೋಗೇಶ್, ಹೆರಿಗೆ ವಿಭಾಗ ಮುಖ್ಯಸ್ಥ ಡಾ.ಪ್ರದೀಪ್, ನರ್ಸೀಂಗ್ ಅಧೀಕ್ಷಕಿ ಚಂದ್ರಕಲಾ , ಮಹೇಶ್ , ಜೆಡಿಎಸ್ ಟೌನ್ ಅಧ್ಯಕ್ಷ ಜಿ.ಎಂ.ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗೌಡ,
ರಾಜ್ಯ ಮಾಜಿ ಕಾರ್ಯದರ್ಶಿರಾಜು ಹೊಂಗನೂರು, ಹಬೀಬ್, ಮುಖಂಡರಾದ ಪಣ್ಯದಹುಂಡಿ ರಾಜಣ್ಣ ಎಲ್ ಐಸಿ, ಮಂಜು ಹೆಗ್ಗೋಠಾರ, ರಾಜು ಮೇಗಲಹುಂಡಿ, ನಾಗರಾಜು ಪಣ್ಯದಹುಂಡಿ ಇತರರು ಹಾಜರಿದ್ದರು.