ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ .ಡಿ .ಕುಮಾರಸ್ವಾಮಿ ಅವರು 66 ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಚಾಮರಾಜೇಶ್ವರಸ್ವಾಮಿಗೆ ಆರ್ಚನೆ ಮಾಡಿಸಿ, ವಿಶೇಷಪೂಜೆ ಸಲ್ಲಿಸಲಾಯಿತು.
ಮುಖಂಡ ಅಜಯ್ ಅರಕಲವಾಡಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು 66 ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಆಚರಿಸಲಾಗಿದೆ ಎಂದರು.
ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ, ಮತ್ತೆ ಮುಖ್ಯಮಂತ್ರಿ ಯಾಗಲಿ ಎಂದು ಹಾರೈಸಿ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಲಾಯಿತು ಎಂದರು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗೌಡ, ಎಲ್ ಐಸಿ ರಾಜು ಪಣ್ಯದಹುಂಡಿ, ಅಜಯ್ ಅರಕಲವಾಡಿ, ನಾಗರಾಜು, ಪಾಪಣ್ಣ, ಸುಂದರ್, ಚಿಕ್ಕಣ್ಣ, ಡಿ.ಎನ್.ಉಷಾ, ಸುಬ್ಬಲಕ್ಷ್ಮಮ್ಮ, ರಘುಪತಿ, ಕರ್ನಾಟಕ ಸೇನಾಪಡೆ ಅಧ್ಯಕ್ಷ ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ಸೈಯದ್ ಅಕ್ರಂ ಇತರರು ಹಾಜರಿದ್ದರು.