ಚಾಮರಾಜನಗರ: ನಗರದಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಸಂತಸ ಮೂಡಿಸಿದೆ.
ಸಂಜೆ ಸುಮಾರು 5 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಭರ್ಜರಿಯಾಗಿ ಸುರಿಯಿತು. ಹಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇಂದಿನ ಮಳೆ ಆಶಾಭಾವನೆ ಮೂಡಿಸಿದೆ.
ಇನ್ನು ಧಾರಾಕಾರ ಮಳೆಯಿಂದ ನಗರದ ಬಿ.ರಾಚಯ್ಯ ಜೋಡಿ ರಸ್ತೆ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ ಸೇರಿದಂತೆ ಹಲವೆಡೆ ಚರಂಡಿಗಳು ತುಂಬಿ ಮಳೆ ನೀರು ರಸ್ತೆಯ ಮೇಲೆ ಹರಿಯಿತು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು.
