ಅಪೌಷ್ಠಿಕತೆ, ರಕ್ತಹೀನತೆ ಸಮಸ್ಯೆ ನಿವಾರಣೆಗೆ ಸಹಕರಿಸಿ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ: ಅಪೌಷ್ಟಿಕತೆ ಮತ್ತು ರಕ್ತಹೀನತೆಯ ಸಮಸ್ಯೆ ತೊಡೆದು ಹಾಕುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. 

ಚಾಮರಾಜನಗರದ ಹರವೆ ಗ್ರಾಮದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪೆÇೀಷಣಾ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಪೌಷ್ಟಿಕತೆ ಮತ್ತು ರಕ್ತಹೀನತೆ ತೊಡೆದು ಹಾಕಲು ಎಲ್ಲರು ಕೈಜೋಡಿಸಬೇಕಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳ ಪಾತ್ರ ತುಂಬಾ ಮಹತ್ವದಾಗಿದೆ ಎಂಧರು.

ಇಲಾಖೆಗಳು ಸಮನ್ವಯ ಸಾಧಿಸಿ ಅಪೌಷ್ಠಿಕತೆಯನ್ನು ಹೋಗಲಾಡಿಸುವುದಕ್ಕೆ ಕ್ರಮವಹಿಸಬೇಕು. ಹರವೆ ಗ್ರಾಮವನ್ನು ಅಪೌಷ್ಠಿಕ ಮುಕ್ತ ಗ್ರಾಮವನ್ನಾಗಿ ಮಾಡಲು ಮುಂದಾಗುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಮಾತನಾಡಿ ಸ್ಥಳೀಯವಾಗಿ ದೊರೆಯುವ ಸೊಪ್ಪು ತರಕಾರಿಗಳನ್ನು ಬಳಸಿಕೊಂಡು ಉತ್ತಮ ಆಹಾರ ಸೇವಿಸಬೇಕು. ಆಹಾರ ಕ್ರಮ ಹಾಗೂ ಬಳಸುವ ಆಹಾರ ಪದಾರ್ಥಗಳು ಇಂದು ಕಲುಷಿತಗೊಳ್ಳುತ್ತಿದ್ದು, ಮನೆಗಳಲ್ಲಿ ಕೈತೋಟಗಳನ್ನು ಬೆಳೆಸಿ ಉತ್ತಮ ಆಹಾರಗಳನ್ನು ಸೇವಿಸುವ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸಬೇಕು ಎಂದರು.

ಜಿಲ್ಲಾಧಿಕಾರಿಗಳಾದ ಶ್ರೀರೂಪ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ, ಅಕ್ಷರ ಅಭ್ಯಾಸ, ಮಾತೃವಂದನಾ ಯೋಜನೆಯ ಅರ್ಜಿ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸುಭದ್ರಾದೇವಿ, ಜಿಲ್ಲಾ ನಿರೂಪಣಾಧಿಕಾರಿ ಬಿ. ಮಂಜುಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ. ತಿಬ್ಬಯ್ಯ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಶಿವಸ್ವಾಮಿ, ಪೆÇೀಷಣ್ ಅಭಿಯಾನ ಯೋಜನೆಯ ಜಿಲ್ಲಾ ಸಂಯೋಜಕರಾದ ಚೇತನ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *