ಸಚಿವ ಸಂಪುಟ ಸಭೆಯ ಹೈಲೈಟ್ಸ್ ಗಳು…

  • ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ
  • *ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
  • 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.
  • PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ
  • 1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.
  • ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.
  • ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.
  • ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.
  • ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.
  • ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.
  • ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ
  • 40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.
  • ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.
  • ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.
  • ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.
  • ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ
  • ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.
  • ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ.
  • ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲಾಗಿದೆ

Leave a Reply

Your email address will not be published. Required fields are marked *