ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಶ್ರಮಿಸುವೆ: ಜೆ.ಯೋಗೇಶ್

  • ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪ್ರಥಮಬಾರಿಗೆ ಭೇಟಿ ನೀಡಿದ ನೂತನ ಸಾರಥಿ ಅದ್ದೂರಿ ಸ್ವಾಗತ

ಚಾಮರಾಜನಗರ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲ ಸಹಕಾರದೊಂದಿಗೆ ತಳಮಟ್ಟದಿಂದ ಸಂಘಟಿಸಲು ಶ್ರಮಿಸಲಾಗುವುದು ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್ ಹೇಳಿದರು.

ಅವರು ನಗರದ ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ  ಪ್ರಪ್ರಥಮವಾಗಿ ಭೇಟಿ ನೀಡಿ ಪಕ್ಷದ ಮುಖಂಡರು, ಕಾರ್ಯಕರ್ತರುಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಬಾರಿಗೆ ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡಿದ್ದೇನೆ. ಪಕ್ಷದ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ.ಎಲ್ಲ ಶಾಸಕರು, ಸಂಸದರು, ಸಚಿವರ ಸಹಕಾರದಿಂದ ಇಂದು ಕಾಂಗ್ರೆಸ್ ಅಧ್ಯಕ್ಷರಾಗಿದ್ದೇನೆ.

ಕಾರ್ಯಕರ್ತರು ಹೈಕಮಾಂಡ್ ಕೂಡ ಒಪ್ಪಿಗೆ ನೀಡಿ ಅವಕಾಶ ಮಾಡಿಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ.

ಎಲ್ಲರಿಗೂ  ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಕಾಂಗ್ರೆಸ್ ಜಿಲ್ಲೆಯಲ್ಲಿ ಭದ್ರಕೋಟೆ ಆಗಿದೆ. ಅದನ್ನು ಸದೃಢಗೊಳಿಸುವ ಕೆಲಸವನ್ನುಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಅಧ್ಯಕ್ಷರುಗಳು, ಮುಖಂಡರುಗಳು, ಕಾರ್ಯಕರ್ತರುಗಳ ಮಾರ್ಗದರ್ಶನದಲ್ಲಿ ಪಕ್ಷವನ್ನು  ಮುನ್ನಡೆಸಿಕೊಂಡು ಹೋಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಆ‌ರ್.ಮಹದೇವು, ಎಂಪಿಎಂಸಿ ನಿರ್ದೇಶಕ ಹೊಮ್ಮ ರವಿಶಂಕರಮೂರ್ತಿ, ಸೇವಾದಳ ಜಿಲ್ಲಾಧ್ಯಕ್ಷ ಜಯರಾಜು, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಆ‌ರ್.ಜಯಣ್ಣ, ಓಬಿಸಿ ಜಿಲ್ಲಾಧ್ಯಕ್ಷ ಚೇತನ್ ಕುಮಾರ್, ಯಳಂದೂರು ಬ್ಲಾಕ್ ಅಧ್ಯಕ್ಷ ಸಿದ್ದರಾಜು, ಪದವೀಧರ ಕ್ಷೇತ್ರದ ಜಿಲ್ಲಾಧ್ಯಕ್ಷ ವೆಂಕಟೇಶ್, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ದೇವರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ರಾಜೇಶ್ ಗೌಡಹಳ್ಳಿ, ಇರಸವಾಡಿ ನಾಗರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *