
ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೇಶನ, ಮನೆಗಳಿಲ್ಲದ ಪೌರಕಾರ್ಮಿಕರಿಗೆ ಆಯಾ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಜಾಗ ಗುರುತಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಶಂಕರ ಅಂಕನಶೆಟ್ಟಿಪುರ ಅವರು ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಜಿಲ್ಲೆಯ ವಿವಿಧ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರೊಂದಿಗೆ ನೇರ ಸಂವಾದ ನಡೆಸಿ, ಕುಂದುಕೊರತೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು. ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೌರಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಸಮಸ್ಯೆಗಳನ್ನು ಆಲಿಸಲಾಗುತ್ತಿದೆ. ಸಾಕಷ್ಟು ಪೌರಕಾರ್ಮಿಕರು ನಿವೇಶನ, ಮನೆ ನೀಡುವಂತೆ ಅಹವಾಲು ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ನಿವೇಶನ, ಮನೆಗಳಿಲ್ಲದ ಪೌರಕಾರ್ಮಿಕರಿಗೆ ಆದ್ಯತೆ ಮೇರೆಗೆ ವಸತಿ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ ಜಾಗ ಗುರುತಿಸಲು ಮುಂದಾಗುವAತೆ ಸೂಚಿಸಿದರು.ಪೌರಕಾರ್ಮಿಕರಿಗೆ ನಿವೇಶನ, ವಸತಿ, ಇ-ಸ್ವತ್ತು, ವೇತನ ಪಾವತಿ, ಆರೋಗ್ಯ ರಕ್ಷಣೆಯಂತಹ ಜ್ವಲಂತ ಸಮಸ್ಯೆಗಳಿವೆ. ಒಂದೊಮ್ಮೆ ಪೌರಕಾರ್ಮಿಕರು ಮುನಿದರೆ ಯಾವ ಊರು, ಗ್ರಾಮ, ಪಟ್ಟಣಗಳು ಶುದ್ಧಿಯಾಗುವುದಿಲ್ಲ. ಅವರ ಸಮಸ್ಯೆಗಳನ್ನು ಹಂತಹAತವಾಗಿಯಾದರೂ ಪರಿಹರಿಸಲು ಅಧಿಕಾರಿಗಳು ತುರ್ತು ಕ್ರಮ ವಹಿಸಬೇಕು. ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮನಸ್ಸು ಮಾಡಿದರೆ ಪೌರಕಾರ್ಮಿಕರ ಬದುಕನ್ನು ಹಸನು ಮಾಡಬಹುದಾಗಿದೆ. ಪೌರಕಾರ್ಮಿಕರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ದೌರ್ಜನ್ಯ ಎಸಗಿದರೆ ಅಂತಹವರ ವಿರುದ್ಧ ಆಯೋಗ ಪ್ರಕರಣ ದಾಖಲಿಸಲಿದೆ ಎಂದರು.
ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಸಾವಿರ ಜನಸಂಖ್ಯೆಗೆ ಓರ್ವ ಪೌರಕಾರ್ಮಿಕರು ಹಾಗೂ 5 ಸಾವಿರಕ್ಕಿಂತ ಹೆಚ್ಚಿದ್ದರೆ ಮತ್ತೊಬ್ಬರನ್ನು ನಿಯೋಜಿಸಿಕೊಳ್ಳಲು ಅವಕಾಶವಿದೆ. ಕೆಲ ಗ್ರಾಮಪಂಚಾಯಿತಿಯಲ್ಲಿ ಪೌರಕಾರ್ಮಿಕರ ಕೊರತೆಯಿದೆ. ಕೆಲವೆಡೆ ಪೌರಕಾರ್ಮಿಕರ ಅನುಮೋದನೆಯಾಗದಿರುವುದರಿಂದ ಅಧಿಕ ಕಾರ್ಯದೊತ್ತಡವಿದೆ. ಹಾಗಿದ್ದರೂ ಪಂಚಾಯಿತಿಗಳು ಸಕಾಲಕ್ಕೆ ವೇತನ ಪಾವತಿಸುತ್ತಿಲ್ಲದಿರುವುದು ಕಂಡುಬAದಿದೆ. ಮುಂದಿನ ದಿನಗಳಲ್ಲಿ ವೇತನ ವಿಳಂಬವಾಗದAತೆ ನೋಡಿಕೊಳ್ಳಬೇಕು. ಸಂಬAಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ ಅನುಮೋದನೆಯಾಗದ ಪೌರಕಾರ್ಮಿಕರ ಪಟ್ಟಿ ತಯಾರಿಸಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸದಸ್ಯರು ತಿಳಿಸಿದರು.
ಗ್ರಾಮಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿಯಾಗುವ ಅಥವಾ ಆಕಸ್ಮಿಕ ಮರಣ ಹೊಂದುವ ಪೌರಕಾರ್ಮಿಕರಿಗೆ ಉಪಧನ ನೀಡುವ ನಿಯಮವಿದೆ. ಕೆಲ ಪಂಚಾಯಿತಿಗಳಲ್ಲಿ ಒಂದು ವರ್ಷದಿಂದ ಉಪಧನ ಬಾಕಿ ಉಳಿಸಿಕೊಳ್ಳಲಾಗಿದ್ದು, ಪಂಚಾಯಿತಿಗಳಲ್ಲಿ ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ, ಹೀಗಾಗಿ ಪಂಚಾಯಿತಿಗಳು ಕರ ವಸೂಲಿಯನ್ನು ಚುರುಕುಗೊಳಿಸಿ ಶೇಖರಣೆಯಾದ ಹಣದಲ್ಲಿ ಪೌರಕಾರ್ಮಿಕರ ಕುಟುಂಬಕ್ಕೆ ಉಪಧನ ನೀಡಲು ಸಕ್ರಿಯವಾಗಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುನಿರಾಜು ಅವರು ಗುಂಡ್ಲುಪೇಟೆ ತಾಲೂಕಿನ ಬೇಗೂರು ಹಾಗೂ ತೆರಕಣಾಂಬಿಯ ಪೌರಕಾರ್ಮಿಕರ ಕಾಲೋನಿಗಳಲ್ಲಿ ಚರಂಡಿ ಸ್ವಚ್ಚತೆ ಸಮಸ್ಯೆ ಬಗ್ಗೆ ಮಾತನಾಡಿ ಜಿಲ್ಲೆಯಲ್ಲಿ ಪೌರಕಾರ್ಮಿಕರ ಕಾಲೋನಿಗಳಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಪರಿಹಾರಕ್ಕಾಗಿ ಅಗತ್ಯ ಪ್ರಸ್ತಾವನೆ ಸಲ್ಲಿಸಿದರೆ ಎಸ್.ಸಿ.ಪಿ ಅಥವಾ ಟಿ.ಎಸ್.ಪಿ ಯೋಜನೆಗಳಡಿ ಸೌಲಭ್ಯ ನೀಡಲು ಆದ್ಯತೆ ನೀಡಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು ಅವರು ಮಾತನಾಡಿ ನಿವೇಶನ, ಮನೆ ಇಲ್ಲದವರಿಗೆ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಒಟ್ಟಾರೆ 25 ಸಾವಿರ ಮನೆಗಳ ಅವಶ್ಯವಿದೆ. 5 ಸಾವಿರ ಜನಸಂಖ್ಯೆ ಮೀರಿದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುವರಿ ಪೌರಕಾರ್ಮಿಕರ ನಿಯೋಜನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಿವೃತ್ತಿ ಹಾಗೂ ಮರಣ ಹೊಂದಿದ ಪೌರಕಾರ್ಮಿಕರ ಕುಟುಂಬಕ್ಕೆ ಉಪಧನ ನೀಡಲು 15ನೇ ಹಣಕಾಸು ಆಯೋಗಕ್ಕೆ ಅನುದಾನ ಬಿಡುಗಡೆಗೆ ಬೇಡಿಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.