ಸಹಕಾರ ಸಂಘಗಳು ಬೆಳೆದರೆ ರೈತರು ಅಭಿವೃದ್ಧಿಯಾಗುತ್ತಾರೆ : ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ವೇದಿಕೆಯಾಗಿದ್ದು, ಸಂಘಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಕಾಪಾಡಿ ಬೆಳೆಸಬೇಕು. ಸಹಕಾರ ಸಂಘಗಳು ಅಭಿವೃದ್ಧಿಯಾದರೆ ರೈತರು ಕೂಡ ಆರ್ಥಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.

ತಾಲೂಕಿನ ಮಂಗಲ ಗ್ರಾಮದಲ್ಲಿ ರೈತ ಸದಸ್ಯರಿಗೆ ಕೆ.ಸಿ.ಸಿ. ಬೆಳೆ ಸಾಲದ ಚೆಕ್ ವಿತರಿಸಿ ಅವರು ಮಾತನಾಡಿದರು.

ರೈತರು ಪಡೆದ ಸಾಲವನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ರೈತರಿಗೆ ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಸಹಕಾರ ಸಂಘದ ಅಭಿವೃದ್ಧಿಗಾಗಿ 10 ಲಕ್ಷ ರೂ. ನೀಡುವುದಾಗಿ ಸಚಿವರು ತಿಳಿಸಿದರು.

ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿ ಸಾಲ ಪಡೆಯಲು ಹಲವು ತಿಂಗಳು ಕಾಯಬೇಕಾಗುತ್ತದೆ. ಆದರೆ ಸಹಕಾರ ಸಂಘಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಶೀಘ್ರವಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಹೀಗಾಗಿ ರೈತರು ಸಹಕಾರ ಸಂಘಗಳ ಮೂಲಕ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಸಂಘದ ರೈತ ಸದಸ್ಯರು ಹಾಗೂ ನಿರ್ದೇಶಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಂಘಕ್ಕೆ ಒಳ್ಳೆಯ ಹೆಸರು ತರಬೇಕು. ಸಹಕಾರ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ರೈತರ ಹಿತದೃಷ್ಟಿಯಿಂದ ನನ್ನ ವ್ಯಾಪ್ತಿಗೆ ಬರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸದಾ ನಿಮ್ಮೊಂದಿಗೆ ಶ್ರಮಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ 68 ನೂತನ ಸದಸ್ಯರಿಗೆ ಒಟ್ಟು 85.75 ಲಕ್ಷ ರೂ.ಗಳ ಕೆ.ಸಿ.ಸಿ. ಬೆಳೆ ಸಾಲದ ಚೆಕ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿದರು.

ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ. ಮಹೇಶ್, ಉಪಾಧ್ಯಕ್ಷರಾದ ಪುಟ್ಟಬುದ್ದಿ, ಸದಸ್ಯರಾದ ಕ್ಯಾತಶೆಟ್ಟಿ, ಎಂ. ಕೃಷ್ಣ, ಎಸ್. ಮಲ್ಲೇಶ್, ಮಹದೇವಶೆಟ್ಟಿ, ಕುಮಾರ, ಎಸ್. ನಾಗೇಶ್, ಎಂ.ಸಿ. ಶಿವಶಂಕರ್, ಪುಷ್ಪವತಿ, ಶಿವಮ್ಮ, ಸಿಇಒ ಗುರಸ್ವಾಮಿ, ವ್ಯವಸ್ಥಾಪಕರಾದ ಜಗದೀಶ್, ಮೇಲ್ವಿಚಾರಕರಾದ ಲಿಂಗರಾಜು, ಇತರರು ಈ ಸಂದರ್ಭದಲ್ಲಿ

Leave a Reply

Your email address will not be published. Required fields are marked *