- ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಮಹಿಳೆಯರಿಗೆ ಅವಕಾಶ
ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33
ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಕಾನೂನು ಆಗಿದ್ದು. ಮಹಿಳೆಯರ ಅಭಿವೃದ್ಧಿ ಹೊಂದಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖಂಡರಾದ ಡಾ.ಪುಣ್ಯವತಿ ಸಿ.ನಾಗರಾಜ್ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಕಾಯ್ದೆಯು ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚು ಮಾಡಿದ್ದು, ಶಾಸನ ಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಈ ಕಾಯ್ದೆ ಜಾರಿಯಿಂದ ಮಹಿ ಳೆಯರ ಸಬಲೀಕರಣವಾಗಲಿದೆ. ಅಲ್ಲದೇ ಆಡಳಿತದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದರು.
ಪ್ರಸ್ತುತ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿ ಕೊಂಡಿದ್ದಾರೆ. ಅಡುಗೆ ಮನೆಗೆ ಸೀಮಿತವಾಗದೇ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರ
ಪ್ರಾತಿನಿಧ್ಯ ಕಡಿಮೆ ಇದೆ. ಈ ಕಾಯ್ದೆ ಜಾರಿಯಿಂದ ಹೆಚ್ಚಿನ ಅವಕಾಶಗಳು ಲಭಿಸಲಿದ್ದು ಮಹಿಳೆಯರು ರಾಜಕೀಯವಾಗಿ ಬೆಳವಣಿಗೆ ಹೊಂದಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಮುದ್ರಾ ಯೋಜನೆ, ಉಜ್ವಲ ಯೋಜನೆ, ಪಿಎಂ ಆವಾಸ್ ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆ ಸೇರಿದಂತೆ ಇತರೆ ಹಲವು ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು.
ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷ ಮಲೆಯೂರು
ಕಮಲಮ್ಮ ಮಾತನಾಡಿ, ನಾರಿ ಶಕ್ತಿ ವಂದನ್ ಕಾಯ್ದೆ ಬೆಂಬಲಿಸಿ ಏ.21 ರಂದು ಜಿಲ್ಲಾ ಕೇಂದ್ರದಲ್ಲಿ ಬೈಕ್ ರ್ಯಾಲಿ, ಮ್ಯಾರಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು..
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಹಿಳಾ
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ.ಶೈಲಜಾ, ಮಮತ ಬಾಲಸುಬ್ರಹ್ಮಣ್ಯಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ, ಮಾಜಿ
ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಶೇಷಪ್ಪ ಪಾಸ್ವಾನ್ ಹಾಜರಿದ್ದರು.