ಫೆಬ್ರವರಿಯಲ್ಲಿ ಸಿ.ಎಂ ಅವರಿಂದ ಆಕ್ಸಿಜನ್ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಚಾಮರಾಜನಗರ: ಕೋವಿಡ್ ಸಂದರ್ಭದಲ್ಲಿ ನಗರದಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿಗಳು ಫೆಬ್ರವರಿ ತಿಂಗಳಿನಲ್ಲಿ ಜಿಲ್ಲೆಗೆ ಬಂದು ವಿತರಿಸಲಿದ್ದಾರೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಫೆಬ್ರವರಿ ತಿಂಗಳಿನಲ್ಲಿ ಮುಖ್ಯಮಂತ್ರಿಗಳೇ ಚಾಮರಾಜನಗರಕ್ಕೆ ಆಗಮಿಸಿ ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

Leave a Reply

Your email address will not be published. Required fields are marked *