ಜೂ. 29ರಂದು ನಗರದಲ್ಲಿ ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನಾ ಸಮಾರಂಭ

ಚಾಮರಾಜನಗರ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಇವರ ಸಂಯುಕ್ತಾಶ್ರಯದಲ್ಲಿ ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನಾ ಸಮಾರಂಭವು ಜೂನ್ 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅವರಣದಲ್ಲಿ ನೆರವೇರಲಿದೆ.  

  ನಗರಾಭಿವೃದ್ಧಿ ಸಚಿವರು ಹಾಗೂ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸುವರು. ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಘನ ಉಪಸ್ಥಿತಿ ವಹಿಸುವರು. 

  ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

  ಶಾಲಾ ಶಿಕ್ಷಣ ಮತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್, ಪಶು ಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯುಕ್ತರಾದ ಕೆ. ವಿದ್ಯಾಕುಮಾರಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *