ಶಾಸಕರಿಂದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉದ್ಘಾಟನೆ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಡಪುರದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರವನ್ನು (ಡಿಡಿಆರ್‍ಸಿ) ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. 

   ಪುನರ್ವಸತಿ ಕೇಂದ್ರದಲ್ಲಿ ವಿಶೇಷಚೇತನರಿಗೆ ಕೃತಕ ಅಂಗಾಂಗಗಳ ಜೋಡಣೆ, ದುರಸ್ತಿ, ಯುಡಿಐಡಿ ಕಾರ್ಡ್ ವಿತರಣೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

   ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಹೆಚ್.ಆರ್. ಸುರೇಶ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ. ಕೆ.ಎನ್. ಮಂಜುನಾಥ, ಜಿಲ್ಲಾ ಸರ್ಜನ್ ಡಾ. ಚಿನ್ನಬೋವಿ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ರಮೇಶ್, ರೂಪೇಶ್, ಕೃಷ್ಣಮೂರ್ತಿ, ಮಹದೇವಸ್ವಾಮಿ, ಇನ್ನಿತರರು ಇದ್ದರು.

Leave a Reply

Your email address will not be published. Required fields are marked *