ಜಿಲ್ಲಾ ಉಸ್ತುವಾರಿ ಸಚಿವರಿಂದ ಕೊಳ್ಳೇಗಾಲದ ರೇಷ್ಮೆ ಮಾರುಕಟ್ಟೆಯಲ್ಲಿ ದ್ವಿತಳಿ ಘಟಕದ ಉದ್ಘಾಟನೆ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿಂದು ದ್ವಿತಳಿ ಘಟಕದ ಉದ್ಘಾಟನೆಯನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಚಾಮರಾಜನಗರ ಜಿಲ್ಲೆಯು ರೇಷ್ಮೆ ಬೆಳೆಗೆ ಪ್ರಸಿದ್ದಿಯಾಗಿದೆ. ಜಿಲ್ಲೆಯಲ್ಲಿ ರೇಷ್ಮೆ ಅಭಿವೃದ್ದಿಗೆ ಪೂರಕವಾದ ವಾತಾವರಣ ಇದೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಲಾಗುವುದು ಎಂದರು.

ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗಾರರು, ಡೀಲರ್ ಗಳಿಗೆ ಅನುಕೂಲವಾಗುವಂತಹ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ರೇಷ್ಮೆ ಇಲಾಖೆಯಿಂದ ರೈತರಿಗೆ ಬಹಳಷ್ಟು ಸಹಕಾರಿಯಾಗಿದೆ. ಮೈಸೂರು ಸಿಲ್ಕ್ ಪ್ರಪಂಚದಲ್ಲಿಯೇ ಹೆಸರು ಪಡೆದಿದೆ. ರೇಷ್ಮೆ ಬೆಳೆಗಾರರ ನೆರವಿಗೆ ಬರಬೇಕಿದೆ. ಕುದೇರಿನಲ್ಲಿರುವ ರೇಷ್ಮೆ ತರಬೇತಿ ಶಾಲೆ ಪುನರ್ ಆರಂಭವಾಗಬೇಕು ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಉಪವಿಭಾಗಾಧಿಕಾರಿ ಮಹೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *