ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ನೀಡಲಾಗುವ ಪ್ರೋತ್ಸಾಹಧನಕ್ಕಾಗಿ (ಸ್ಟೆöÊಫಂಡ್ ಟೂ ಅಡ್ವಕೇಟ್) 2025-26ನೇ ಸಾಲಿಗೆ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಿ ತರಬೇತಿ ಭತ್ಯೆ ಮಂಜೂರಾತಿಗಾಗಿ ಜಿಲ್ಲೆಯಲ್ಲಿ ಗರಿಷ್ಠ 10ರ ಭೌತಿಕ ಗುರಿಯನ್ನು ಮೀರದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತ ಅರ್ಹ ಹಿಂದುಳಿದ ವರ್ಗಗಳ ಕಾನೂನು ಪದವೀಧರರು ನಿಗದಿತ ನಮೂನೆಯಲ್ಲಿ ನಿಬಂಧನೆಗೊಳಪಟ್ಟು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಜನಾಂಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02-08-2025ಕ್ಕೆ ಪ್ರವರ್ಗ-1ಕ್ಕೆ ಸೇರಿರುವ ಅಭ್ಯರ್ಥಿಗಳು 40 ವರ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗೆ ಸೇರಿದ ಅಭ್ಯರ್ಥಿಗಳು 38ರ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಗಳು ಕಾನೂನು ಪದವೀಧರರಾಗಿದ್ದು, ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಗೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 18-07-2025ಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ. ಹಾಗೂ ಉಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ರೂ.ಗಳಿಗಿಂತ ಮೀರಿರಬಾರದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಹೆಯಾನ 4 ಸಾವಿರ ರೂ.ನಂತೆ ನಾಲ್ಕು ವರ್ಷಗಳವರೆಗೆ ತರಬೇತಿ ಭತ್ಯೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿ ಮಧ್ಯಂತರದಲ್ಲಿ ತರಬೇತಿ ಬಿಟ್ಟಲ್ಲಿ ಸರ್ಕಾರದಿಂದ ಮಂಜೂರಾದ ಹಣವನ್ನು ವಾಪಸ್ಸು ಕಟ್ಟಬೇಕು.
ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ಕಾನೂನು ಪದವಿ ಅಂಕಪಟ್ಟಿಗಳು, ಪದವಿ ಪತ್ರ (ಪ್ರೋವಿಷಿನಲ್ ಡಿಗ್ರಿ ಸರ್ಟಿಫಿಕೇಟ್, ಪಾಸ್ಸಿಂಗ್ ಸರ್ಟಿಫಿಕೇಟ್) ಬಾರ್ ಕೌನ್ಸಿಲ್ ನೊಂದಣಿ ಪತ್ರ, ಪ್ರಾಕ್ಟೀಸ್ ಸರ್ಟಿಫಿಕೇಟ್, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡಿನ ದೃಢೀಕೃತ ಪ್ರತಿ ಮತ್ತು 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸಬೇಕು.
ತರಬೇತಿ ಅವಧಿ ನಾಲ್ಕು ವರ್ಷಗಳಾಗಿದ್ದು ತರಬೇತಿಯನ್ನು ಸರ್ಕಾರಿ ಅಭಿಯೋಜಕರು, ಸರ್ಕಾರಿ ವಕೀಲರು ಅಥವಾ 15 ವರ್ಷಕ್ಕೆ ಕಡಿಮೆ ಇಲ್ಲದಂತೆ ವಕೀಲ ವೃತ್ತಿ ನಡೆಸುತ್ತಿರುವ ವಕೀಲರ ಬಳಿ ಪಡೆಯಬೇಕಾಗಿರುತ್ತದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಚಾಮರಾಜನಗರ ಜಿಲ್ಲೆಯಲ್ಲಿ ವಾಸವಿರುವ ಅಭ್ಯರ್ಥಿಗಳನ್ನಷ್ಟೇ ಪರಿಗಣಿಸಲಾಗುವುದು. ಆಯ್ಕೆ ಮಾಡುವ ಮತ್ತು ತಿರಸ್ಕೃತಗೊಳಿಸುವ ಅಧಿಕಾರವು ಆಯ್ಕೆ ಸಮಿತಿಗೆ ಸಂಬAಧಿಸಿದ್ದಾಗಿದ್ದು, ಆಯ್ಕೆ ಸಮಿತಿಯಲ್ಲಿ ತೆಗೆದುಕೊಳ್ಳುವ ಕಾನೂನುಬದ್ಧ ನಿರ್ಣಯವೇ ಅಂತಿಮವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಂಬAಧಪಟ್ಟ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ 15ರೊಳಗೆ ನಗರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.