ಚಾಮರಾಜನಗರ ಜಿಲ್ಲೆಯಲ್ಲಿ ಮಾದರ ಮಹಾಸಭಾದ ಸದಸ್ಯತ್ವ ಹೆಚ್ಚು ಮಾಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪ

  • ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಿಗೆ ನೇಮಕಾತಿ ಆದೇಶಪತ್ರ ವಿತರಣೆ

ಚಾಮರಾಜನಗರ: ಕರ್ನಾಟಕ ಮಾದರ ಮಹಾಸಭಾಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯತ್ವ ಮಾಡಿಸಿ ಸಂಘಟನೆ ಬಲಪಡಿಸಬೇಕು ಎಂದು ಮಾದರ ಮಹಾಸಭಾದ ಸಂಸ್ಥಾಪಕ ರಾಜ್ಯ ಅಧ್ಯಕ್ಷರು ಹಾಗೂ ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್ .ಮುನಿಯಪ್ಪ ಹೇಳಿದರು.
ಬೆಂಗಳೂರಿನಲ್ಲಿ ಕರ್ನಾಟಕ ಮಾದರ ಮಹಾಸಭಾದ ಕಚೇರಿಯಲ್ಲಿ ಚಾಮರಾಜನಗರ ಜಿಲ್ಲೆ ಮತ್ತು ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶಪತ್ರ ವಿತರಿಸಿ ಮಾತನಾಡಿದರು.
ಚಾಮರಾಜನಗರ ಜಿಲ್ಲೆ ಮತ್ತು ಚಾಮರಾಜನಗರ, ಗುಂಡ್ಲುಪೇಟೆ,ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಸಮಿತಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ನಿಮಗೆಲ್ಲ ಜವಾಬ್ದಾರಿ ನೀಡಲಾಗಿದೆ. ನೂತನ ಪದಾಧಿಕಾರಿಗಳು
ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಿ, ಉತ್ತಮವಾಗಿ ಕೆಲಸ ನಿರ್ವಹಿಸುವ ಮೂಲಕ ಸದಸ್ಯತ್ವ ಹೆಚ್ಚು ಮಾಡಿ ಸಂಘಟನೆ ಸದೃಢಗೊಳಿಸಿ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ಎಂದರು.
ಕರ್ನಾಟಕ ಮಾದಾರ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಪ್ಪ, ಜಿಲ್ಲಾಧ್ಯಕ್ಷ ಎಂ. ಶಿವಮೂರ್ತಿ ಹಾಜರಿದ್ದರು.

Leave a Reply

Your email address will not be published. Required fields are marked *