ಮೈಸೂರು : ಮೈಸೂರಿನ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದೇಶಭಕ್ತಿ, ಶ್ರದ್ಧೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳು, ಪೆÇೀಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಈ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಡಾ. ಗಜಾನನ ಹೆಗಡೆ ರವರು, “ಸ್ವಾತಂತ್ರ್ಯ ಎಂಬುದು ಕೇವಲ ಮುಕ್ತಿಯಲ್ಲ; ಅದು ರಾಷ್ಟ್ರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಹೊಣೆಗಾರಿಕೆ, ಸೃಜನಶೀಲತೆ ಮತ್ತು ಕ್ರಿಯಾಶೀಲತೆಯನ್ನು ಒಳಗೊಂಡಿರುತ್ತದೆ” ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸುವ ಜತೆಗೆ, ಭಾರತದ ಸ್ವಾತಂತ್ರ್ಯದ ಹಿಂದಿನ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕೆಂದು ಅವರು ಕರೆ ನೀಡಿದರು.
ದೇಶವನ್ನು ರೂಪಿಸುವಲ್ಲಿ ‘ಆಧ್ಯಾತ್ಮ’ ಮತ್ತು ‘ಸಂಸ್ಕøತಿ’ಯ ಪಾತ್ರವನ್ನು ಒತ್ತಿಹೇಳಿದ ಡಾ. ಹೆಗಡೆ ರವರು, ಸಂವಿಧಾನವನ್ನು ಗೌರವಿಸುವುದು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳುವುದು ಬಲವಾದ ಭಾರತದ ನಿರ್ಮಾಣಕ್ಕೆ ಅತ್ಯಗತ್ಯ ಎಂದರು. ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಕ್ರಿಯಾಶೀಲವಾಗಿ ಮತ್ತು ಸೃಜನಶೀಲವಾಗಿ ಕೊಡುಗೆ ನೀಡಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ. ರವರು, “ಭಾರತವು ಕೇವಲ 80 ವರ್ಷಗಳ ಇತಿಹಾಸವಿರುವ ರಾಷ್ಟ್ರವಲ್ಲ; ಇದು ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸ ಮತ್ತು ಸಾಂಸ್ಕೃತಿಕ ಗುರುತನ್ನು ಹೊಂದಿರುವ ಮಹಾನ್ ನಾಗರಿಕತೆಯಾಗಿದೆ” ಎಂದು ಅಭಿಪ್ರಾಯಪಟ್ಟರು. ‘ವಿಷ್ಣು ಪುರಾಣ’ದಂತಹ ಪ್ರಾಚೀನ ಗ್ರಂಥಗಳನ್ನು ಉಲ್ಲೇಖಿಸಿದ ಅವರು, ‘ಭಾರತ’ ಎಂಬ ಹೆಸರಿನ ಉಲ್ಲೇಖವೇ ಈ ದೇಶದ ಪುರಾತನ ನಾಗರಿಕತೆಯ ಪರಂಪರೆಗೆ ಸಾಕ್ಷಿಯಾಗಿದೆ ಎಂದರು.
2047ರ ವೇಳೆಗೆ ಭಾರತವನ್ನು ವಿಕಸಿತ (ಅಭಿವೃದ್ಧಿ ಹೊಂದಿದ) ರಾಷ್ಟ್ರವನ್ನಾಗಿ ಮಾಡುವ ಪರಿಕಲ್ಪನೆಯ ಕುರಿತು ಮಾತನಾಡಿದ ಅವರು, ದೇಶವು ಈ ಗುರಿಯತ್ತ ಸ್ಥಿರವಾಗಿ ಹೆಜ್ಜೆ ಹಾಕುತ್ತಿದೆ ಎಂದರು. ಪ್ರತಿಯೊಬ್ಬ ನಾಗರಿಕನು ತನ್ನ ಜವಾಬ್ದಾರಿಯನ್ನು ಅರಿತು, ಶ್ರಮಪಟ್ಟು ದುಡಿದು ಗಳಿಸುವುದರ ಜತೆಗೆ ಸಮಾಜಕ್ಕೆ ಮತ್ತು ದೇಶಕ್ಕೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ವೈಯಕ್ತಿಕ ಬೆಳವಣಿಗೆಯ ಜೊತೆಗೆ ಸಮಾಜದ ಅಭಿವೃದ್ಧಿಯೂ ಸಾಗಬೇಕು ಎಂದು ಅವರು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಶಿಸ್ತು, ಏಕತೆ ಮತ್ತು ದೇಶಭಕ್ತಿಯ ಸಂಕೇತವಾದ ಪಥಸಂಚಲನ ಜರುಗಿತು. ತದನಂತರ, ಭಾರತದ ಶ್ರೀಮಂತ ಪರಂಪರೆ, ವೈವಿಧ್ಯತೆ ಮತ್ತು ರಾಷ್ಟ್ರೀಯ ಭಾವನೆಯನ್ನು ಬಿಂಬಿಸುವ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳ ಮೈನವಿರೇಳಿಸುವ ಅಭಿನಯವು ಆಚರಣೆಗೆ ಮೆರಗು ತಂದಿತು.
ಈ ಸಂಭ್ರಮಾಚರಣೆಯಲ್ಲಿ ವಿಜಯ ವಿಠ್ಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹೆಚ್. ಸತ್ಯಪ್ರಸಾದ್, ವಿಜಯ ವಿಠ್ಠಲ ವಿದ್ಯಾಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ವೀಣಾ ಎಸ್. ಎ. ಹಾಗೂ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೆÇೀಷಕರು ಉಪಸ್ಥಿತರಿದ್ದರು.
