ಮೈಸೂರು : ನಗರದ ಹೆಬ್ಬಾಳದಲ್ಲಿ ಇರುವ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ 79ನೇ ಸ್ವತಂತ್ರ್ಯ ದಿನ ಆಚರಿಸಲಾಯಿತು.
ರಾಷ್ಟ್ರೀಯ ನಾಯಕರಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಬಸವಮಾರ್ಗ ಫೌಂಡೇಶನ್ ಅಧ್ಯಕ್ಷ ಎಸ್. ಬಸವರಾಜು, ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ಹೋರಾಟ ಮಾಡಿದರು. ಆ ಮಹನೀಯರು ಇಂದು ಬದುಕ್ಕಿದ್ದರೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡುತ್ತಿದ್ದರು. ದೇಶದ ಪ್ರಜೆಗಳಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ವ್ಯಸನಿಗಳಿಗೆ ವ್ಯಸನದಿಂದ ಸ್ವಾತಂತ್ರ್ಯ ಸಿಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಯುವಕರು ದೇಶದ ಶಕ್ತಿ. ಆದರೆ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ದುಷ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಇಂತಹ ಮಕ್ಕಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ದುಷ್ಚಟಕ್ಕೆ ಬಲಿಯಾದ ಮಕ್ಕಳಿಗೆ ವಸತಿ ಹಾಗೂ ಶಿಕ್ಷಣ ನೀಡಬೇಕು ಎಂದು ಬಸವಮಾರ್ಗ ಫೌಂಡೇಶನ್ ವತಿಯಿಂದ ವಸತಿ ನಿಲಯ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಮಾರಂಭದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವ್ಯಸನಿಗಳು ನೃತ್ಯ ಪ್ರದರ್ಶನ ಮಾಡಿ ನೋಡುಗರಿಂದ ಚಪ್ಪಾಳೆ ಗಿಟ್ಟಿಸಿದರು. ಬಳಿಕ ವ್ಯಸನಮುಕ್ತ ಸಮಾಜಕ್ಕೆ ಕೈ ಜೋಡಿಸುತ್ತೇವೆ ಎಂದು ಶಿಬಿರಾರ್ಥಿಗಳು ಪ್ರತಿಜ್ಞೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಮಹೇಶ್, ಸಿಬ್ಬಂದಿ ಆಶಾರಾಣಿ, ರಾಧಿಕಾ, ಮನೋಜ್ ದೇವ್, ಅರ್ಚಿತ್ ರಾಮ್, ಶುಭಾ, ಆನಂದ್ ಇತರರು ಇದ್ದರು.
ಚಿತ್ರ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಎಸ್.ಬಸವರಾಜು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಶಾರಾಣಿ, ರಾಧಿಕಾ, ಮನೋಜ್ ದೇವ್, ಶುಭಾ ಇದ್ದರು.