ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ನ್ಯಾಯಾಧೀಶರಾದ ಈಶ್ವರ್

  • ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮದ ಪ್ರಯುಕ್ತ ಕಾನೂನು ಅರಿವು‌ ಕಾರ್ಯಕ್ರಮ

ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದುಕೊಟ್ಟಿರುವ  ಸಂವಿಧಾನವು  ವಿಶ್ವದಲ್ಲೇ  ಅತ್ಯಂತ ಶ್ರೇಷ್ಠ ವಾಗಿದೆ ಎಂದು   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಈಶ್ವರ್ ಹೇಳಿದರು.
     ತಾಲೂಕಿನ‌ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್ ನಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮದಿನದ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಸಂವಿಧಾನವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪವಿತ್ರ ಗ್ರಂಥವಾಗಿದ್ದು,ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿ, ಸಮಾನತೆ ಮತ್ತು ಮೂಲಭೂತ ಹಕ್ಕುಗಳನ್ನು ಖಾತರಿಪಡಿಸುತ್ತದೆ. 
ನಾಗರಿಕರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ಒದಗಿಸುತ್ತದೆ.
ಸಮಾಜದ ಎಲ್ಲಾ ವರ್ಗದ ಜನರಿಗೆ, ವಿಶೇಷವಾಗಿ ಹಿಂದುಳಿದವರಿಗೆ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದರು.
  ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ,  ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದು ಜಾತಿಗೆ ಸೀಮಿತವಲ್ಲ ದೇಶದ ಎಲ್ಲವರ್ಗದ ನಾಯಕರು. ಆಗಾಗಿ ಅವರು ಬರೆದುಕೊಟ್ಟಿರುವ ಸಂವಿಧಾನ ಅಳವಡಿಸಿಕೊಂಡು ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬ ನಾಗರಿಕ ಪೂಜಿಸಬೇಕು ಎಂದರು.
  ಉದ್ಯಮಿ ಶ್ರೀನಿಧಿ ಕುದರ್ ಮಾತನಾಡಿ, ಡಾ.ಬಿ.ಆರ್
ಅಂಬೇಡ್ಕರ್ ಅವರು ಮಹಿಳೆಯರ ಸಬಲೀಕರಣ ಕ್ಕಾಗಿ ಮುನ್ನುಡಿ ಬರೆದರು ಎಂದರು.
ಭೋಗಾಪುರ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜು ಮುಖ್ಯಭಾಷಣ ಮಾತನಾಡಿ, ಅಂಬೇಡ್ಕರ್ ಜಯಂತಿ ಯನ್ನು ವಿಶ್ವಸಂಸ್ಥೆಯು ಆಚರಣೆ ಮಾಡುತ್ತಿದ್ದು ಅವರ ಜನ್ಮದಿನವನ್ನು ವಿಶ್ವ ಜ್ಞಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.  ಬ್ರಿಟಿಷರನ್ನು ಭಾರತಕ್ಕೆ ಸ್ವಾತಂತ್ರ್ಯ ಕೊಡಿ ಎಂದು ನೇರವಾಗಿ ಕೇಳಿದ ವ್ಯಕ್ತಿ ಅಂಬೇಡ್ಕರ್.
ಅವರ ಕೊಡುಗೆ ಅಪಾರವಾಗಿದೆ ಎಂದರು.
ಕೆಇಬಿ ಜೂನಿಯರ್ ಇಂಜಿನಿಯರ್ ವಿ.ಮಯೂರ್,  ಮಾತನಾಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯ ಸಂಚಾಲಕ ಬಿ.ಕೆ.ದಾನೇಶ್ವರಿ ಅಧ್ಯಕ್ಷತೆ ವಹಿಸಿದ್ದರು.
ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಪ್ರಭು ಪ್ರಾಸ್ತಾವಿಕ ಭಾಷಣ ಮಾಡಿದರು. ಗಡಿನಾಡ ಜನಪದ ಕೋಗಿಲೆಗಳ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಜ.ಸುರೇಶ್ ನಾಗ್ ನಿರೂಪಿಸಿದರು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *